Latestಕ್ರೀಡೆದೇಶ-ವಿದೇಶವೈರಲ್ ನ್ಯೂಸ್

ಪಾಕಿಸ್ತಾನದ ಕ್ರಿಕೆಟ್ ಪಂದ್ಯಗಳ ಪ್ರಸಾರಕ್ಕೆ ಭಾರತದಲ್ಲಿ ತಡೆ..! ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳನ್ನು ಶಾಶ್ವತವಾಗಿ ರದ್ದು ಮಾಡುವಂತೆ ಆಗ್ರಹ..!

391

ನ್ಯೂಸ್ ನಾಟೌಟ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿಯಲ್ಲಿ ಅನೇಕ ಪ್ರವಾಸಿಗರು ಸಾವನ್ನಪ್ಪಿರುವ ಘಟನೆಗೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನ ಬೆಂಬಲಿತ ಉಗ್ರರ ಈ ಹೇಯ್ಯ ಕೃತ್ಯಕ್ಕೆ ದೇಶಾದ್ಯಂತ ಪ್ರತಿಕಾರದ ಕೂಗು ಜೋರಾಗಿ ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಈಗಾಗಲೇ ಪಾಕಿಸ್ತಾನದ ವಿರುದ್ಧ ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.

ಈಗ ಪಾಕಿಸ್ತಾನ ಕ್ರಿಕೆಟ್ ಮೇಲೂ ಕ್ರಮ ಕೈಗೊಳ್ಳಲಾಗಿದ್ದು ಪಾಕಿಸ್ತಾನದ ಟಿ20 ಲೀಗ್, ಪಾಕಿಸ್ತಾನ್ ಸೂಪರ್ ಲೀಗ್ (Pakistan Super League) ಅನ್ನು ಭಾರತದಲ್ಲಿ ಪ್ರಸಾರ ಮಾಡುವ ಕಂಪನಿಯು ತಕ್ಷಣದಿಂದ ಜಾರಿಗೆ ಬರುವಂತೆ ಲೀಗ್ ಪ್ರಸಾರವನ್ನು ರದ್ದುಗೊಳಿಸಿದೆ. ಇದರರ್ಥ ಈಗ ಪಾಕಿಸ್ತಾನ ಸೂಪರ್ ಲೀಗ್ ಪಂದ್ಯಗಳನ್ನು ಭಾರತದಲ್ಲಿ ವೀಕ್ಷಿಸಲು ಸಾಧ್ಯವಾಗುವುದಿಲ್ಲ.

ಪಾಕಿಸ್ತಾನಿ ಭಯೋತ್ಪಾದಕರು ಹಲವಾರು ಪ್ರವಾಸಿಗರನ್ನು ಆಯ್ದು ಗುಂಡಿಕ್ಕಿ ಕೊಂದಿದ್ದರು. ಈ ಘಟನೆಯಲ್ಲಿ 26 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ.

ಇಷ್ಟೆಲ್ಲಾ ಆದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳನ್ನು ಶಾಶ್ವತವಾಗಿ ರದ್ದುಗೊಳಿಸಬೇಕೆಂಬ ಬೇಡಿಕೆ ಕೇಳಿಬರುತ್ತಿದೆ. ಈ ವಿಷಯದಲ್ಲಿ ಎಲ್ಲರ ಕಣ್ಣುಗಳು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮೇಲೆ ನೆಟ್ಟಿವೆ. ಆದರೆ ಅದಕ್ಕೂ ಮುನ್ನ, ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಫ್ಯಾನ್‌ಕೋಡ್ ಪಾಕಿಸ್ತಾನ ಸೂಪರ್ ಲೀಗ್‌ನ ಪ್ರಸಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಮಾಡಿದೆ.

‘ಸಿಂಧೂ ನದಿಯ ನೀರು ನಿಲ್ಲಿಸಿದ್ರೆ ನಮ್ಮನ್ನು ಯುದ್ಧಕ್ಕೆ ಆಹ್ವಾನಿಸಿದಂತೆ’, ಭಾರತಕ್ಕೆ ಪಾಕಿಸ್ತಾನದ ಖಡಕ್ ವಾರ್ನಿಂಗ್..!

See also  ಸುಳ್ಯ: ನಟ ದರ್ಶನ್ ಅಭಿಮಾನಿಗಳಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ, ಅಂಗನವಾಡಿ ಮಕ್ಕಳಿಗೆ ಪುಸ್ತಕ, ಪೆನ್ಸಿಲ್ ಮತ್ತು ಸಿಹಿ ತಿಂಡಿ ವಿತರಣೆ
  Ad Widget   Ad Widget   Ad Widget   Ad Widget   Ad Widget   Ad Widget