ನ್ಯೂಸ್ ನಾಟೌಟ್: ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು. ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮಂಗಳೂರಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಿದ್ದಕ್ಕೆ ಹತ್ಯೆಯಾಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಸಿಎಂ, ಯಾರು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರು? ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಅದು ತಪ್ಪು. ಈ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ತಪ್ಪೇ, ಅದು ದೇಶದ್ರೋಹ. ತನಿಖೆ ನಡೆಯುತ್ತಿದೆ, ಈ ಬಗ್ಗೆ15 ಜನರ ಅರೆಸ್ಟ್ ಆಗಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ, ಬಸವ ಜಯಂತಿ ಹಿನ್ನೆಲೆ ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು.
ಮಾಜಿ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಜೈಲಿನಿಂದ ಬಿಡುಗಡೆ..! 93 ದಿನಗಳ ಬಳಿಕ ಜಾಮೀನು..!