Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪಾಕ್‌ ದಾಳಿಗೆ ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು..! ನಿವಾಸಕ್ಕೆ ಬಡಿದ ಪಾಕ್‌ ನ ಶೆಲ್..!

541

ನ್ಯೂಸ್ ನಾಟೌಟ್: ಜಮ್ಮು–ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ಮುಂಜಾನೆ(ಮೇ.10) ತೀವ್ರ ಗುಂಡಿನ ದಾಳಿ ನಡೆಸಿದ ಪರಿಣಾಮ ಹೆಚ್ಚುವರಿ ಜಿಲ್ಲಾಧಿಕಾರಿ ಮೃತಪಟ್ಟಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ನಗರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಪಾಕ್‌ನ ಶೆಲ್ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಮತ್ತಿಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನೂ ರಾಜ್ ಕುಮಾರ್ ತಾಪ್ಪಾ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್‌ ಅಬ್ದುಲ್ಲಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾವು ಸರ್ಕಾರದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ರಾಜ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಜತೆಗೆ, ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ ಲೈನ್ ಸಭೆಯಲ್ಲೂ ಭಾಗವಹಿಸಿದ್ದರು ಎಂದು ಒಮರ್‌ ಸ್ಮರಿಸಿದ್ದಾರೆ.

ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ಭಾರತದಿಂದ ಕ್ಷಿಪಣಿ ದಾಳಿ..! ನೂರ್ ಖಾನ್ ವಾಯುನೆಲೆಯಲ್ಲಿ ಭಾರಿ ಸ್ಫೋಟ..!

ಭಾರತ- ಪಾಕ್ ಸಂಘರ್ಷ: ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ..! ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ..!

See also  22ನೇ ವಯಸ್ಸಿನಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಶಾಕ್..! 48 ವರ್ಷಗಳ ಬಳಿಕ ಮನೆಗೆ ಬಂದ ಆಫರ್‌ ಲೆಟರ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget