Latestದೇಶ-ವಿದೇಶರಾಜಕೀಯರಾಜ್ಯವಿಡಿಯೋವೈರಲ್ ನ್ಯೂಸ್

ಪಾಕ್‌ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರಸಾರ..! ವಿಡಿಯೋ ವೈರಲ್

1.4k

ನ್ಯೂಸ್ ನಾಟೌಟ್: ಪಾಕಿಸ್ತಾನ ಮಾಧ್ಯಮಗಳಲ್ಲೂ ಸಿಎಂ ಸಿದ್ದರಾಮಯ್ಯ ಈಗ ಫೇಮಸ್‌ ಆಗಿದ್ದಾರೆ. ಭಾರತ ಯುದ್ಧ ಮಾಡಬಾರದು ಎಂದಿದ್ದ ಸಿಎಂ ಹೇಳಿಕೆಯನ್ನು ಪಾಕ್‌ ಮಾಧ್ಯಮಗಳು ಪ್ರಸಾರ ಮಾಡಿವೆ.

ಪಾಕ್‌ ಮಾಧ್ಯಮಗಳಲ್ಲಿ ಸಿದ್ದರಾಮಯ್ಯ ಹೇಳಿಕೆ ಪ್ರಸಾರವಾದ ಬೆನ್ನಲ್ಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

 

“ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ”

“ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ”

“ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ” ಎಂದು ವಿರೋಧ ಪಕ್ಷದ ನಾಯಕ ಬರೆದುಕೊಂಡಿದ್ದಾರೆ.

See also  ಬೈಕ್ ಗೆ ಗುದ್ದಿದರೂ ಮಾನವೀಯತೆ ತೊರಲಿಲ್ಲವೇ ಕಾಮಿಡಿ ಸ್ಟಾರ್ ಚಂದ್ರಪ್ರಭ! ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಈ ಕಲಾವಿದನ ಮೇಲೆ 'ಹಿಟ್ ಆ್ಯಂಡ್ ರನ್ ಕೇಸ್'!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget