Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪಾಕ್ ರೈಲನ್ನು ಹೈಜಾಕ್ ಮಾಡಿದ್ದ ಉಗ್ರರಿಂದ 155 ಒತ್ತೆಯಾಳುಗಳ ರಕ್ಷಣೆ..! ಕಾರ್ಯಾಚರಣೆಯಲ್ಲಿ 27 ಉಗ್ರರ ಹತ್ಯೆ..!

268
Spread the love

ನ್ಯೂಸ್ ನಾಟೌಟ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಈ ವೇಳೆ 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿ ತಿಳಿಸಿದೆ.

ರಕ್ಷಣಾ ಕಾರ್ಯಾಚರಣೆಯ ವೇಳೆ 37 ಪ್ರಯಾಣಿಕರು ಗಾಯಗೊಂಡಿದ್ದು, ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಮಂಗಳವಾರ(ಮಾ.11) ಮಧ್ಯಾಹ್ನ ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಒಂಬತ್ತು ಬೋಗಿಗಳಿರುವ ಜಾಫರ್ ಎಕ್ಸ್‌ ಪ್ರೆಸ್ ರೈಲಿನಲ್ಲಿ ಸುಮಾರು 400 ಪ್ರಯಾಣಿಕರು ಸಂಚರಿಸುತ್ತಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್ಎ) ದಾಳಿಯ ಹೊಣೆ ಹೊತ್ತುಕೊಂಡಿತ್ತು.
ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯ ನಡುವೆಯೂ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಈಗಲೂ ಮುಂದುವರಿದಿದ್ದು, ಸುರಂಗವನ್ನು ಪಾಕ್ ಭದ್ರತಾ ಪಡೆ ಸುತ್ತುವರಿದಿದೆ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸುಮಲತಾ ಅಂಬರೀಶ್ ಅನ್ನು ಅನ್‌ ಫಾಲೋ ಮಾಡಿದ ನಟ ದರ್ಶನ್..! ಕುತೂಹಲ ಮೂಡಿಸಿದ ಸುಮಲತಾ ಪೋಸ್ಟ್..!

ಇದನ್ನೂ ಓದಿ: AK-47 ಗನ್ ಹಿಡಿದು ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ ಪುಟ್ಟ ಬಾಲಕಿ..! ವಿಡಿಯೋ ವೈರಲ್

See also  ಕಾಣಿಯೂರು: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಯುವಕ
  Ad Widget   Ad Widget   Ad Widget   Ad Widget