ನ್ಯೂಸ್ ನಾಟೌಟ್: ಲಾಹೋರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು(ಎ.26) ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದಾಗಿ ರನ್ ವೇ ಬಂದ್ ಮಾಡಲಾಗಿದ್ದು, ಎಲ್ಲಾ ವಿಮಾನಗಳ ಹಾರಾಟವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪಾಕಿಸ್ತಾನ ಸೇನೆಯ ವಿಮಾನ ಲ್ಯಾಂಡಿಂಗ್ ವೇಳೇ ಟೈಯರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಸದ್ಯ ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ. ಘಟನೆ ಬಳಿಕ ರನ್ ವೇಯನ್ನು ಮುಚ್ಚಲಾಗಿದ್ದು, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಪಾಕಿಸ್ತಾನದ ಅಲ್ಲಾಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದೇ ಮೊದಲಲ್ಲ.
Fire breaks out at Allama Iqbal International Airport. It is also known as Lahore International Airport, Pakistan.#Terrorism #Fire #PehalgamTerroristAttack pic.twitter.com/oFeZCp7MNQ
— Kapadia CP (@Ckant72) April 26, 2025
ಈ ಹಿಂದೆ ಕೂಡ ವಿಮಾನ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಇದು ದೇಶದಲ್ಲಿ ಕಳಪೆ ಮೂಲಸೌಕರ್ಯ ಮತ್ತು ಭದ್ರತಾ ಮಾನದಂಡಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ.