Latestದೇಶ-ವಿದೇಶ

ಪಾಕ್ ಮತ್ತು ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಸಿಎಂ ಗಳ ತುರ್ತು ಸಭೆ ಕರೆದ ಅಮಿತ್ ಶಾ..! ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿಪಿಗಳು ಕೂಡ ಭಾಗಿ..!

502

ನ್ಯೂಸ್ ನಾಟೌಟ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಕಿಸ್ತಾನ ಮತ್ತು ನೇಪಾಳದೊಂದಿಗೆ ಗಡಿ ಹೊಂದಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿಪಿಗಳ ತುರ್ತು ಸಭೆ ಕರೆದಿದ್ದಾರೆ. ಪಹಲ್ಗಾಮ್‌ ನ ದಾಳಿಗೆ ಪ್ರತೀಕಾರವಾಗಿ ಭಾರತವು (India) ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಮಿಲಿಟರಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸಭೆ ಕರೆದಿದ್ದಾರೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಸಭೆಯಲ್ಲಿ ಅಮಿತ್​​ ಶಾ ಪಾಕಿಸ್ತಾನ ಮತ್ತು ನೇಪಾಳದೊಂದಿಗೆ ಎಲ್ಲಾ ಗಡಿ ರಾಜ್ಯಗಳ ಮುಖ್ಯಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರು ಮತ್ತು ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದಾರೆ.

ಇದರಲ್ಲಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಮತ್ತು ಲಡಾಖ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್‌ ಗಳು ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

ಆಪರೇಷನ್ ಸಿಂಧೂರ: ರಿಯಲ್ ಹೀರೋಗಳು ನೀವೇ ಎಂದ ಖ್ಯಾತ ನಟ ಮಮ್ಮುಟ್ಟಿ, ಭಾರತೀಯ ಸೇನೆಯನ್ನು ಕೊಂಡಾಡಿದ ನಟ ಮೋಹನ್ ಲಾಲ್

ಸುಳ್ಯ: ರಸ್ತೆ ಬದಿ ನಿಂತಿದ್ದ ಲಾರಿಗೆ ಗುದ್ದಿದ ದ್ವಿಚಕ್ರ ವಾಹನ, ಸ್ಕೂಟರ್ ಸವಾರನಿಗೆ ಗಾಯ

See also  ರಾತ್ರೋರಾತ್ರಿ ಕೋಟ್ಯಧಿಪತಿಯಾದ ವಾಚ್‌ ಮೆನ್..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget