ನ್ಯೂಸ್ ನಾಟೌಟ್: ಪಾಕಿಸ್ತಾನಕ್ಕೆ ತೆರಳಲು ಕಾಲಾವಕಾಶ ನೀಡಬೇಕೆಂದು ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ ಪ್ರಜೆಗಳಿಗೆ ಭಾರತ ಬಿಟ್ಟು ತೊಲಗಿ ಎಂದು ಸೂಚನೆ ನೀಡಲಾಗಿದೆ. ಇದರಿಂದ ಮದುವೆಗೆಂದು ಮೈಸೂರಿಗೆ ಬಂದು ತಾಯಿ ಜೊತೆ ಇದ್ದ ಪಾಕಿಸ್ತಾನ ಪೌರತ್ವ ಹೊಂದಿರುವ ಮೂರು ಮಕ್ಕಳು ವಾಪಸ್ ತಮ್ಮ ದೇಶಕ್ಕೆ ತೆರಳಲಾಗದೇ ಕೋರ್ಟ್ ಮೊರೆ ಹೋಗಿದ್ದು, ಪಾಕಿಸ್ತಾನಕ್ಕೆ ತೆರಳಲು ಸಮಯ ನೀಡುವಂತೆ ಮಕ್ಕಳ ಪರವಾಗಿ ಮೈಸೂರು ಮೂಲದ ತಾಯಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ.
ಅಲ್ಲದೇ ಮಾನವೀಯತೆ ಆಧಾರದಲ್ಲಿ ಮೇ 15ರವರೆಗೆ ಕಾಲಾವಕಾಶಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಮಾನವೀಯತೆ ತೋರಿದ್ದಕ್ಕೆ ಈಗ ಅನುಭವಿಸುತ್ತಿದ್ದೇವೆ ಎಂದಿದ್ದಾರೆ.
ಪಾಕಿಸ್ತಾನಿ ತಂದೆ, ಮೈಸೂರಿನ ತಾಯಿಗೆ ಜನಿಸಿರುವ ಮೂವರು ಮಕ್ಕಳು ಬೀಬಿ ಯಮೀನಾ, ಮೊಹಮ್ಮದ್ ಮುದಸ್ಸಿರ್, ಮೊಹಮ್ಮದ್ ಯೂಸುಫ್ ಪಾಕಿಸ್ತಾನದ ಪೌರತ್ವ ಹೊಂದಿದ್ದಾರೆ. ಹೀಗಾಗಿ ಪಾಕಿಸ್ತಾನಕ್ಕೆ ವಾಪಸ್ ಹೋಗಲು ಸಮಯವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ. ಕೇಂದ್ರ ಸರ್ಕಾರದ ಪರವಾಗಿ ಡಿಎಸ್ ಜಿ ಶಾಂತಿಭೂಷಣ್ ವಾದ ಮಂಡಿಸಿದರು.
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ 8 ವರ್ಷದ ಬಿಬಿ ಯಾಮಿನಾ, 4 ವರ್ಷದ ಮೊಹಮ್ಮದ್ ಯುದಾಸಿರ್ ಹಾಗೂ 3 ವರ್ಷದ ಮೊಹಮ್ಮದ್ ಯೂಸುಫ್ ಈ ಅರ್ಜಿ ಸಲ್ಲಿಸಿದ್ದಾರೆ. ಈ ಮೂವರು ಪಾಕಿಸ್ತಾನಿ ಪ್ರಜೆಗಳಾಗಿದ್ದಾರೆ. ಇದೀಗ ಈ ಮೂವರು ಮಕ್ಕಳು ತಾವು ಮೈಸೂರನಲ್ಲಿ ಕನಿಷ್ಠ ಮೇ.15ರ ವರೆಗೆ ಇರಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಇವರ ತಂದೆ ಬಲೂಚಿಸ್ತಾನದಲ್ಲಿದ್ದು, ತಾಯಿ ರಂಶಾ ಜಹಾನ್ ಜೊತೆ ಮೈಸೂರಿಗೆ ಆಗಮಿಸಿದ್ದರು.
ಭಾರತದ ದಾಳಿಯಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದು ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದ..! ಇಲ್ಲಿದೆ ವಿಡಿಯೋ