ನ್ಯೂಸ್ ನಾಟೌಟ್:ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ (Operation Sindoor) ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ ಧ್ವಂಸ ಮಾಡಲಾಗಿತ್ತು. ಈ ಘಟನೆಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹಾಗೂ ಅವರ ಸಂಬಂಧಿಕರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ನಿನ್ನೆ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಾಗರಿಕರ ಮೇಲೆ ಶೆಲ್ ದಾಳಿ ನಡೆಸಿ 16 ಜನರನ್ನು ಕೊಂದಿತ್ತು. ಅಲ್ಲದೆ, ಭಾರತದ ಇನ್ನೂ 15 ನಗರಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ಲಾನ್ ಮಾಡಿತ್ತು. ಆ ಪ್ರಯತ್ನವನ್ನು ಮೆಟ್ಟಿ ನಿಂತಿರುವ ಭಾರತೀಯ ಸೇನೆ ಇಂದು ಮತ್ತೆ ಪಾಕಿಸ್ತಾನದೊಳಗೆ ನುಗ್ಗಿ ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದೆ. ಈ ಮೂಲಕ ಆಪರೇಷನ್ ಸಿಂಧೂರವನ್ನು ಮುಂದುವರೆಸಿದೆ.
ಭಾರತೀಯ ಸೇನೆಯಿಂದ ಪಾಕಿಸ್ತಾನದ ಲಾಹೋರ್, ಕರಾಚಿ, ಸಿಯೋಲ್ ಕೋಟ್ ಮೇಲೆ ದಾಳಿ ನಡೆಸಲಾಗಿದೆ. ಭಾರತದ ಮೇಲೆ ಪಾಕ್ ದಾಳಿಯನ್ನು ವಿಫಲಗೊಳಿಸಿದ ಬಳಿಕ ಭಾರತೀಯ ಸೇನೆಯಿಂದ ದಾಳಿ ನಡೆಸಲಾಗಿದೆ. ಪಾಕಿಸ್ತಾನ ಭಾರತದ ಚಂಡೀಗಢ, ಆವಂತಿಪೊರ, ಜಲಂಧರ್, ಲೂಧಿಯಾನ, ಅಮೃತಸರ, ಪಠಾಣಕೋಟ್, ಕಪೂರ್ತಲಾ, ನಲ, ಫಲೋಡಿ, ಉತ್ತರಲೈ, ಭುಜ್, ಜಮ್ಮು, ಶ್ರೀನಗರ, ಆಧಂಪುರ, ಭಟಿಂಡಾ ಮೇಲೆ ದಾಳಿಗೆ ಯತ್ನಿಸಿತ್ತು.
This morning, the Indian Armed Forces targeted Air Defence Radars and systems at a number of locations in Pakistan. Indian response has been in the same domain with same intensity as Pakistan. It has been reliably learnt that an Air Defence system at Lahore has been neutralised.… pic.twitter.com/z2OexT2nJP
— ANI (@ANI) May 8, 2025
ನಿನ್ನೆ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ದಾಳಿಗೆ ಮುಂದಾಗಿತ್ತು. ಪಾಕಿಸ್ತಾನ ಸೇನೆಯ ದಾಳಿಯನ್ನು ವಿಫಲಗೊಳಿಸಿರುವ ಭಾರತೀಯ ಸೇನೆ S-400 ಏರ್ ಡಿಫೆನ್ಸ್ ಸಿಸ್ಟಮ್ ಮೂಲಕ ಪಾಕಿಸ್ತಾನದ ಚೀನಾ ನಿರ್ಮಿತ HQ-9 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಧ್ವಂಸ ಮಾಡಿದೆ. ಪಾಕಿಸ್ತಾನದ ಕ್ಷಿಪಣಿಗಳ ಅವಶೇಷಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಲಾಹೋರ್ ನಲ್ಲಿ ಪಾಕಿಸ್ತಾನದ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ಭಾರತ ನಾಶಪಡಿಸಿದೆ.