ಕ್ರೈಂವೈರಲ್ ನ್ಯೂಸ್

ಪಾಕಿಸ್ತಾನದ ಧ್ವಜ ಹಾರಿಸಿದ ಅಪ್ಪ-ಮಗ ಅರೆಸ್ಟ್..! ಉಂಡಮನೆಗೆ ದ್ರೋಹ ಬಗೆದ ಈ ಖತರ್ನಾಕ್ ವ್ಯಕ್ತಿಗಳು ಯಾರು..?

268

ನ್ಯೂಸ್ ನಾಟೌಟ್: ಭಾರತದಲ್ಲಿದ್ದುಕೊಂಡು ಇಲ್ಲಿಯದ್ದೇ ಅನ್ನ ತಿಂದುಂಡು ಪಾಕಿಸ್ತಾನದ ಧ್ವಜ ಹಾರಿಸಿದ ಅಪ್ಪ -ಮಗನನ್ನು ಪೊಲೀಸರು ಅರೆಸ್ಟ್ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ. ಮನೆಯಲ್ಲಿ ಪಾಕಿಸ್ತಾನಿ ಧ್ವಜವನ್ನು ಹಾರಿಸಿದ ವ್ಯಕ್ತಿಗಳನ್ನು ರಯೀಸ್ ಮತ್ತು ಅವರ ಮಗ ಸಲ್ಮಾನ್ ಎಂದು ಗುರುತಿಸಲಾಗಿದ್ದು ಇಬ್ಬರನ್ನೂ ಪೊಲೀಸರು ಇದೀಗ ತನಿಖೆಗೆ ಒಳಪಡಿಸಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನ ಮನೆಯೊಂದರಲ್ಲಿ ನಡೆದಿದೆ. ಮೊರಾದಾಬಾದ್ ನ ಭಗತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಹಾನ್ ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಭಗತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಹಾನ್ ಪುರ ಗ್ರಾಮದಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ರಯೀಸ್ ಮತ್ತು ಅವರ ಪುತ್ರ ಸಲ್ಮಾನ್, ಬಿಳಿ ಮತ್ತು ಹಸಿರು ಬಟ್ಟೆಯಿಂದ ಪಾಕಿಸ್ತಾನಿ ಧ್ವಜವನ್ನು ತಯಾರಿಸಿ ಮನೆಯ ಮೇಲ್ಛಾವಣಿಯ ಮೇಲೆ ಹಾಕಿದ್ದರು.

ಈ ಧ್ವಜವನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲ್ಛಾವಣಿಯ ಮೇಲೆ ಪಾಕಿಸ್ತಾನದ ಧ್ವಜವನ್ನು ಸ್ಥಾಪಿಸಿರುವುದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾದರು ಮತ್ತು ಯಾರೋ ಒಬ್ಬರು ಪಾಕಿಸ್ತಾನಿ ಧ್ವಜದ ವಿಡಿಯೋವನ್ನು ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮನೆಯಲ್ಲಿ ಹಾರಾಡುತ್ತಿದ್ದ ಪಾಕಿಸ್ತಾನದ ಧ್ವಜವನ್ನು ಕೆಳಗಿಳಿಸಿ, ರಯೀಸ್ ಹಾಗೂ ಆತನ ಪುತ್ರ ಸಲ್ಮಾನ್ ನನ್ನು ಬಂಧಿಸಲಾಯಿತು. ಈ ಪ್ರಕರಣದಲ್ಲಿ ಅವರ ವಿರುದ್ಧ ಭಗತ್‌ಪುರ ಪೊಲೀಸ್ ಠಾಣೆಯಲ್ಲಿ ಕಲಂ 153 ಎ ಮತ್ತು 153 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಬ್ಬರೂ ಆರೋಪಿಗಳನ್ನು ಅವರ ಮನೆಯಲ್ಲಿ ಪಾಕಿಸ್ತಾನಿ ಧ್ವಜವನ್ನು ಹಾಕಲು ಕಾರಣವನ್ನು ಕೇಳಿದಾಗ ಯಾವುದೇ ಉತ್ತರವನ್ನು ನೀಡಿಲ್ಲ.

https://www.youtube.com/watch?v=NUhCvM–Ihk
See also  4,500 ಎಕರೆ ಜಾಗಕ್ಕೆ ಸರ್ಕಾರ ಮತ್ತು ರಾಜ ಮನೆತನದ ನಡುವೆ ಜಟಾಪಟಿ..? ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ ಎಂದ ರಾಜಮಾತೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget