ಕ್ರೈಂರಾಜ್ಯವೈರಲ್ ನ್ಯೂಸ್

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ, ಜಾಮೀನು ಮಂಜೂರಾಗಿದ್ದರೂ ಪೊಲೀಸ್ ಠಾಣೆಗೆ ಬಂದು ಶಿಕ್ಷೆಗೊಳಪಡಬೇಕೆಂದು ಹೈಕೋರ್ಟ್ ಆದೇಶ

248

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶ ದ್ರೋಹಿಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗೆ ಇಲ್ಲೊಬ್ಬ ವ್ಯಕ್ತಿ ಘೋಷಣೆ ಕೂಗಿ ಇದೀಗ ಭಾರೀ ಶಿಕ್ಷೆಗೆ ಗುರಿಯಾಗಿದ್ದಾನೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ, ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರದಂದು ಭೋಪಾಲ್‌ ಪೊಲೀಸ್ ಠಾಣೆಯ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವಂತೆ ಸೂಚಿಸಿದೆ.

ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಮೇಲೆ ಫೈಝಲ್ ಅಲಿಯಾಸ್ ಫೈಜಾನ್ ವಿರುದ್ಧ ಕಳೆದ ಮೇ ತಿಂಗಳಿನಲ್ಲಿ ಭೋಪಾಲ್‌ನ ಮಿಸ್ರೋಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 153ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಪಲಿವಾಲ್ ಅವರು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಷ್ಟೇ ಮೌಲ್ಯಕ್ಕೆ ಒಬ್ಬರ ಭದ್ರತೆ ಒದಗಿಸಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ತಾನು ಹುಟ್ಟಿ ಬೆಳೆದ ದೇಶದ ವಿರುದ್ಧ ಬಹಿರಂಗವಾಗಿ ಘೋಷಣೆಗಳನ್ನು ಆರೋಪಿ ಕೂಗಿದ್ದಾನೆ ಎಂದು ಹೇಳಿರುವ ನ್ಯಾಯಾಲಯ, ‘ವಿಚಾರಣೆ ಮುಗಿಯುವರೆಗೂ ಆರೋಪಿಯು ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರ ಭೋಪಾಲ್‌ನ ಮಿಸ್ರೋಡ್ ಪೊಲೀಸ್ ಠಾಣೆಯ ಮುಂದೆ ಹಾಜರಾಗಬೇಕು. ಭಾರತ್ ಮಾತಾ ಕೀ ಜೈ ಘೋಷಣೆ ಕೂಗುವ ಮೂಲಕ ಠಾಣೆಯ ಮೇಲೆ ಹಾರಿಸಿರುವ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸಬೇಕು’ ಎಂದು ಸೂಚಿಸಿದೆ. ‘ಇದು ಆತನಿಗೆ ತಾನು ಹುಟ್ಟಿ ಬೆಳೆದ ದೇಶದ ಬಗ್ಗೆ ಜವಾಬ್ದಾರಿ ಮತ್ತು ಹೆಮ್ಮೆಯ ಭಾವನೆಯನ್ನು ಉಂಟುಮಾಡಬಹುದು’ ಎಂದು ಅಭಿಪ್ರಾಯಪಟ್ಟಿದೆ. ಆರೋಪಿಗೆ ವಿರುದ್ಧ 14 ಕ್ರಿಮಿನಲ್ ಪ್ರಕರಣಗಳಿದ್ದು, ಜಾಮೀನು ಮಂಜೂರು ಮಾಡಬಾರದು ಎಂದು ರಾಜ್ಯ ಸರ್ಕಾರದ ವಕೀಲರು ವಾದಿಸಿದ್ದಾರೆ.

Click

https://newsnotout.com/2024/10/cctv-kannada-news-father-reinvestigation/
https://newsnotout.com/2024/10/yathnal-kannada-news-arrest-warrent-kana-ka/
See also  ರೇವಣ್ಣ ಕುಟುಂಬಕ್ಕೆ ಮತ್ತೊಂದು ಆಘಾತ..! ಡಾ.ಸೂರಜ್​ ರೇವಣ್ಣ ಪ್ರಕರಣ​ ಸಿಐಡಿಗೆ ವರ್ಗಾವಣೆ..! ಎಡಿಜಿಪಿ ಬರೆದ ಪತ್ರದಲ್ಲೇನಿದೆ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget