Latestಕ್ರೈಂಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ..! 50ಕ್ಕೂ ಹೆಚ್ಚು ಅಧಿಕಾರಿಗಳಿಂದ ತೀವ್ರ ಶೋಧ..!

240

ನ್ಯೂಸ್ ನಾಟೌಟ್: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಅಕ್ರಮದ ಅಡ್ಡೆಯಾಗಿ ಪರಿವರ್ತನೆ ಆಗುತ್ತಿದೆ ಎಂಬ ಆರೋಪದ ಬೆನ್ನಲ್ಲೇ ಸಿಸಿಬಿ ದಾಳಿ ನಡೆಸಿ ಪರಿಶೀಲಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳು ಹೆಚ್ಚಾಗಿ ಬಳಕೆಯಾಗುತ್ತಿವೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಜೂನ್ 16ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೂ ಜೈಲಿನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಸಿಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಪರಪ್ಪನ ಅಗ್ರಹಾರ ಕಾರಾಗೃಹದ ಸಜಾಬಂಧಿ ಬ್ಯಾರಕ್ ಹಾಗೂ ವಿಐಪಿ ಬ್ಯಾರಕ್‌ ನಲ್ಲಿ ಸಿಸಿಬಿಯ ಐವತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆಸಿದ್ದರು.

ದಾಳಿ ವೇಳೆ ಕಸೂರಿ ಮೇತಿ ಸೊಪ್ಪು, ಬೀಡಿ ಪ್ಯಾಕೆಟ್ಸ್, ಗಾಂಜಾ, ಮೊಳೆಗಳು, ಹರಿತವಾದ ವಸ್ತುಗಳು, ಗುಟ್ಕಾ ತಂಬಾಕು ಪ್ಯಾಕೆಟ್ಸ್, ಸುಣ್ಣದ ಡಬ್ಬಿ, ಡೈರಿಗಳು, ಚಾಕುಗಳು, ನಗದು ಹಣ, ಮೊಬೈಲ್ ಚಾರ್ಜರ್, ಕತ್ತರಿ, ಕಬ್ಬಿಣದ ರಾಡ್ ಪತ್ತೆಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ಬಳಕೆಯಾಗುತ್ತಿರುವ ಬಗ್ಗೆ ಸಿಸಿಬಿ ಅಧಿಕಾರಿಗಳು ಎಫ್‌ ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಕೋರ್ಟ್ ಆವರಣದಲ್ಲೇ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರೆಸ್ಟ್..! ಬಾಲಕನ ಅಪಹರಣ ಪ್ರಕರಣಕ್ಕೆ​ ಟ್ವಿಸ್ಟ್..!

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದಿದ್ದ ಪತ್ನಿಗೆ 1 ವರ್ಷದ ಬಳಿಕ ಜಾಮೀನು ಮಂಜೂರು..! ಇತ್ತೀಚೆಗೆ ಜಾಮೀನು ಪಡೆದಿದ್ದ ಇನ್ನೊಬ್ಬ ಆರೋಪಿ..!

See also  7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯುದ್ಧವಿಮಾನ ಸಮುದ್ರದಾಳದಲ್ಲಿ ಪತ್ತೆಯಾಗಿದ್ದೇಗೆ..? ಅಂದು ನಾಪತ್ತೆಯಾಗಿದ್ದೇಕೆ..?
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget