ಕ್ರೈಂರಾಜ್ಯವೈರಲ್ ನ್ಯೂಸ್

ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ..! ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆಯ ಫೋಟೊ ವೈರಲ್..!

221

ನ್ಯೂಸ್ ನಾಟೌಟ್: ಪಿಡಿಒ ನೇಮಕಾತಿಗೆ ಸಂಬಂಧಿಸಿ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಕ್ರೋಶ ವ್ಯಕ್ತವಾಗಿದೆ.

ಧಾರವಾಡದ ಕೆಎನ್‌ಕೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ಕೈ ಸೇರುವ ಮೊದಲೇ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಸಾಮಾನ್ಯ ಜ್ಞಾನ ವಿಷಯಕ್ಕೆ ಸಂಬಂಧಪಟ್ಟ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು ಎನ್ನಲಾಗಿದೆ.

ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್ ​ನ ಸೀಲ್ ಹಾಕಿರಲಾಗುತ್ತದೆ. ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್​ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಕೆಪಿಎಸ್‌ಸಿ ಸರಿಯಾಗಿ ಪರೀಕ್ಷೆ ನಡೆಸಿಲ್ಲವೆಂದು ಅಭ್ಯರ್ಥಿಗಳು ಆರೋಪ ಮಾಡಿದ್ದು, ಮರುಪರೀಕ್ಷೆ ಹಲವರು ನಡೆಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಎಸ್‌ಸಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿಯನ್ನೂ ಮಾಡಲಾಗಿದೆ.

Click

https://newsnotout.com/2024/12/mother-and-2-child-kannada-news-viral-news-bengaluru/
https://newsnotout.com/2024/12/kannada-news-teaching-chennai-school-girl-get-unconcious/
https://newsnotout.com/2024/12/kannada-news-g-kannada-news-police-d-odisha/
https://newsnotout.com/2024/12/udupi-fishing-man-and-theft-4-lakh-rupees-case-police/
https://newsnotout.com/2024/12/indian-army-kannada-news-jammu-and-kashmir-solider-d/
https://newsnotout.com/2024/12/tamil-nadu-kannada-news-12-district-tamilnadu-hf/
See also  ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವಕ್ಕೆ ದಿನಗಣನೆ, ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವಕ್ಕೆ ಸಿದ್ಧತೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget