ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಅನ್ಯ ಕೋಮಿನ ವ್ಯಕ್ತಿಯಿಂದ ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ..! ಆಕೆಯ ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು

ನ್ಯೂಸ್ ನಾಟೌಟ್: 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮದುವೆ ಮುನ್ನವೇ ಎರಡು ಬಾರಿ ಗರ್ಭ ಧರಿಸಿರುವ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ಸದ್ಯ ಈ ಘಟನೆ ಸಿನಿಮೀಯ ತಿರುವು ಪಡೆದುಕೊಂಡಿದೆ. ತನ್ನ ಒಂದು ಮಗುವನ್ನು ತನಗೆ ತಿಳಿಯದಂತೆಯೇ ಮಾರಾಟ ಮಾಡಲಾಗಿದೆ ಎಂದು ದೂರಿರುವ ಆಕೆ ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾಳೆ. ಪೋಷಕರು, ಶಿಕ್ಷಕರು, ವಕೀಲ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 17 ವರ್ಷದ ಬಾಲಕಿ ಇಬ್ಬರು ವಿಭಿನ್ನ ಪುರುಷರ ಜತೆ ದೇಹ ಸಂಬಂಧ ಬೆಳೆಸಿದ್ದಳು. ಹೀಗಾಗಿ ಎರಡು ಬಾರಿ ಗರ್ಭ ಧರಿಸಿದ್ದಳು. ಈ ಪೈಕಿ ಒಂದು ನವಜಾತ ಶಿಶುವನ್ನು ತನ್ನ ಪೋಷಕರು, ಶಾಲಾ ಪ್ರಾಂಶುಪಾಲರು, ಇಬ್ಬರು ಮಹಿಳಾ ವೈದ್ಯರು, ಸಾಮಾಜಿಕ ಕಾರ್ಯಕರ್ತೆ, ವಕೀಲರು ಮತ್ತು ಇತರರು ಸೇರಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಾಲಕಿಯ ಪೋಷಕರು ಸೇರಿದಂತೆ ಕನಿಷ್ಠ 16 ಮಂದಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆ ಯಡಿ ಪ್ರಕರಣ ದಾಖಲಿಸಲಾಗಿದೆ. 2021ರಲ್ಲಿ 23 ವರ್ಷದ ಅನ್ಯ ಕೋಮಿನ ಜತೆ ಅಕ್ರಮ ಸಂಬಂಧ ಹೊಂದಿದ್ದ ಬಾಲಕಿ ಮೊದಲ ಬಾರಿ ಗರ್ಭಿಣಿಯಾಗಿದ್ದಳು. ಆಕೆ ಗರ್ಭ ಧರಿಸಿರುವ ವಿಚಾರ ಪೋಷಕರ ಗಮನಕ್ಕೆ ಬಂದಿತ್ತು.

ಬಳಿಕ ಪೋಷಕರು ಶಾಲೆಯ ಪ್ರಾಂಶುಪಾಲ ಮತ್ತು ಸಾಮಾಜಿಕ ಕಾರ್ಯಕರ್ತೆಗೆ ವಿಚಾರ ತಿಳಿಸಿ ಅವರ ಸಹಾಯ ಕೋರಿದರು. 7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ʼʼಇದಕ್ಕೂ ಮೊದಲು ಪೋಷಕರು ತನ್ನನ್ನು ಮುಂಬೈಯ ಯಾವುದೋ ಒಂದು ಸ್ಥಳಕ್ಕೆ ಕರೆದೊಯ್ದು ಅಲ್ಲಿ ವಕೀಲರ ಸಮ್ಮುಖದಲ್ಲಿ ಕೆಲವು ದಾಖಲೆಗಳಿಗೆ ಸಹಿ ಹಾಕಿಸಿದ್ದರುʼʼ ಎಂದು ಬಾಲಕಿ ತಿಳಿಸಿದ್ದಾಳೆ ಎಂದು ಮೂಲಗಳು ವರದಿ ಮಾಡಿವೆ. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಲಾಯಿತು. ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

Related posts

ಪೆರಾಜೆ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ

ಮೋದಿ ಮತ್ತು ಯೋಗಿಗೆ 16ರ ಬಾಲಕನಿಂದ ಕೊಲೆ ಬೆದರಿಕೆ! ಇಬ್ಬರನ್ನೂ ಮುಗಿಸುವುದಾಗಿ ಮೇಲ್!

ಪವಿತ್ರಾ ಮನೆಯಿಂದ ನಟ ದರ್ಶನ್ ಒಳ ಉಡುಪು, ಹೇರ್ ಸ್ಯಾಂಪಲ್ ಅನ್ನು ವಶಕ್ಕೆ ಪಡೆದ ಪೊಲೀಸರು..!, ಮಾಧ್ಯಮಗಳಿಗೆ ಮಧ್ಯದ ಬೆರಳು ತೋರಿಸಿದ ನಟನಿಗೆ ಮತ್ತೆ ಸಂಕಷ್ಟ