ಕ್ರೈಂ

ಕೊಟ್ಟ ಹಣ ವಾಪಸ್ ಮಾಡದ್ದಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ

710

ನ್ಯೂಸ್ ನಾಟೌಟ್: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಕುಶಾಲನಗರದ ರಾಧಾಕೃಷ್ಣ ಬಡಾವಣೆಯಲ್ಲಿ ನಡೆದಿದೆ.

ಸಮಿಯುಲ್ಲಾ ಖಾನ್(೪೦) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಹೆಂಡತಿ ಸುಹಾನಾರವರು ಕರ್ತವ್ಯ ಮುಗಿಸಿ ಮನೆಗೆ ಬಂದ ಸಮಯದಲ್ಲಿ ಘಟನೆ ಬೆಳಕಿಗೆ ಬಂದಿದೆ. ಕುಶಾಲನಗರದ ಅನುರಾಧಾ ಮೊಬೈಲ್ ಮಳಿಗೆ ಮಾಲೀಕರಾಗಿದ್ದರು. ತನ್ನ ಸಾವಿಗೆ ಕಾರಣ ಯಾರು ಎಂದು ಮರಣ ಪ್ರಮಾಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಣ ಪ್ರಮಾಣ ಪತ್ರದಲ್ಲಿ ವ್ಯಕ್ತಿಯೋರ್ವ ತನಗೆ ಹಣ ನೀಡದೇ ಇರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಸಮಿಯುಲ್ಲಾ ತನ್ನ ಹೆಂಡತಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ. ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

See also  ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾದ ನಟಿ ರಮ್ಯಾ..! ಆದಷ್ಟು ಬೇಗ ಮತ್ತೆ ನಟಿಸುತ್ತೇನೆ ಎಂದ ನಟಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget