ನ್ಯೂಸ್ ನಾಟೌಟ್: ಭಾರತ ಮಾತೆ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 2024ರ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಈ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು.
ಇದನ್ನು ಕಂಡ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದರು. ಗಜೇಂದ್ರಗಡ ಪೊಲೀಸರು ಆರೋಪಿ ತಾಜುದ್ದೀನ್ ದಫೇದಾರ್ನನ್ನು ಬಂಧಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಕೆಲಸಗಳು ಆಗಾಗ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ನಿಯಮಗಳನ್ನು ಜಾರಿಗೊಳಿಸುವ ಅಗತ್ಯವಿದೆ.