Uncategorized

7ನೇ ಕ್ಲಾಸ್‌ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿ..!ಸಂಬಂಧಿ ಯುವಕನಿಂದಲೇ ಅತ್ಯಾಚಾರದ ಆರೋಪ

ನ್ಯೂಸ್‌ ನಾಟೌಟ್‌: ಅಪ್ರಾಪ್ತೆ ಮೇಲೆ ಯುವಕನೊರ್ವ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಇದೀಗ 5 ತಿಂಗಳ ಗರ್ಭಿಣಿಯಾಗಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಂಬಂಧಿ ಯುವಕನಿಂದಲೇ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ. ಈ ಬಗ್ಗೆ ತಿಳಿದು ಬಾಲಕಿಯ ಪಾಲಕರು ಕಂಗಾಲಾಗಿದ್ದಾರೆ.ಈ ವಿಚಾರವನ್ನು ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತೆಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರಲ್ಲಿ ಆರೈಕೆ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Related posts

ಭೀಕರ ರಸ್ತೆ ಅಪಘಾತ;ಯುವಕ ದಾರುಣ ಅಂತ್ಯ

ಭೀಕರ ಕಾರು ಅಪಘಾತ: ಕೊಡಗು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಸಾವು

ಪುತ್ತೂರಿಗೆ ಅರುಣ್ ಕುಮಾರ್ ಪುತ್ತಿಲ ಎಂಎಲ್‌ಎ..? ನಿಜ ಆಗುತ್ತಾ ಭವಿಷ್ಯವಾಣಿ..?