‘ಪಿಂಗಾರ’ ಚಿತ್ರಕ್ಕೆ ಅತ್ಯುತ್ತಮ ತುಳು ಚಲನಚಿತ್ರ ರಾಷ್ಟ್ರಪ್ರಶಸ್ತಿ

4

ಬೆಂಗಳೂರು: 2019ನೇ ಸಾಲಿನ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದಿದೆ. ಪ್ರಾದೇಶಿಕ ಭಾಷೆಗಳಲ್ಲಿನ ಚಲನಚಿತ್ರ ವಿಭಾಗದಲ್ಲಿ ‘ಪಿಂಗಾರ’ ಚಿತ್ರವು ಅತ್ಯುತ್ತಮ ತುಳು ಚಲನಚಿತ್ರ ಪ್ರಶಸ್ತಿ ಪಡೆದಿದೆ. ಚಿತ್ರದ ನಿರ್ಮಾಪಕ ಅವಿನಾಶ್‌ ಯು. ಶೆಟ್ಟಿ ಹಾಗೂ ನಿರ್ದೇಶಕ ಪ್ರೀತಮ್ ಶೆಟ್ಟಿ ಅವರು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕರಾವಳಿ ಭಾಗದಲ್ಲಿ ದೇವರ ಆರಾಧನೆಗಿಂತ ದೈವಾರಾಧನೆ ಸಂಸ್ಕೃತಿ ಹೆಚ್ಚಾಗಿದೆ. ದೈವವನ್ನು ತಮ್ಮ ಮೇಲೆ ಆವರಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವವರು ಸಮಾಜದ ಹಿಂದುಳಿದ ದಲಿತ ಜಾತಿಯವರೇ ಆದರೂ, ಅವರನ್ನು ಕ್ಷಣಿಕವಾಗಿ ದೇವರೆಂದೇ ಪರಿಗಣಿಸಲಾಗುತ್ತದೆ. ‘ಪಿಂಗಾರ’ ಚಿತ್ರದ ಕಥೆಯನ್ನು ಈ ಅಪರೂಪದ ಸಂಸ್ಕೃತಿಯ ಸುತ್ತ ಹೆಣೆಯಲಾಗಿದೆ. ತುಳು ಚಿತ್ರರಂಗ ಹಾಗೂ ರಂಗಭೂಮಿಯ ಖ್ಯಾತ ಕಲಾವಿದರಾದ ನೀಮಾರೇ, ಶರಣ್ ಶೆಟ್ಟಿ, ಉಷಾ ಭಂಡಾರಿ, ಗುರು ಹೆಗ್ಡೆ, ಸಿಂಚನ ಚಂದ್ರಮೋಹನ್, ಸುನಿಲ್ ನೆಲ್ಲಿಗುಡ್ಡೆ ಹಾಗೂ ಪ್ರಶಾಂತ್ ಸಿ.ಕೆ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಪ್ರೀತಮ್ ಶೆಟ್ಟಿ ಅವರೇ ಈ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ. ಶಶಿರಾಜ್ ರಾವ್ ಕಾವೂರ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದು, ವಿ.ಪವನ್ ಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo