ನ್ಯೂಸ್ ನಾಟೌಟ್: ಕರ್ನಾಟಕ ರಾಜ್ಯ ಡ್ಯಾನ್ಸ್ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಡಿ ಯುನೈಟೆಡ್ ಡ್ಯಾನ್ಸ್ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಕ್ರಮವಾಗಿ ಚಿನ್ನ, ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.

ಪಿರಿಯಾಪಟ್ಟಣದಲ್ಲಿ ಭಾನುವಾರ ನಡೆದ ಸ್ಪರ್ಧೆಯಲ್ಲಿ ವೈಷ್ಣವಿ ಪ್ರಕಾಶ್ ಚಿನ್ನದ ಪಡೆದುಕೊಂಡರೆ ಹವೀಶ್ ಬೆಳ್ಳಿ ಪದಕ ಪಡೆದರು. ಈ ಇಬ್ಬರೂ ವಿದ್ಯಾರ್ಥಿಗಳಿಗೆ ಅಭಿ ಕುಲಾಲ್ ತರಬೇತಿ ನೀಡಿದ್ದಾರೆ. ವಿಶೇಷವೆಂದರೆ ಈ ಇಬ್ಬರೂ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.