ನ್ಯೂಸ್ ನಾಟೌಟ್: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ. ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ಉಳ್ಳ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಅದು ಸಮರ್ಪಕವಾಗಿ ಜಾರಿಯಾಗಿರಲಿಲ್ಲ. ಈಗ ಜಾರಿಯಾಗದಿದ್ದರೆ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿಲಾಗಿದೆ.
Click
ಗಡಿಪಾರು ಮಾಡಲಾದ 205 ಭಾರತೀಯರನ್ನು ಭಾರತಕ್ಕೆ ಕರೆತರಲಿರುವ ಅಮೆರಿಕದ ಮಿಲಿಟರಿ ವಿಮಾನ..! ಇಲ್ಲಿದೆ ಸಂಪೂರ್ಣ ಮಾಹಿತಿ
ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!
ರಾಹುಲ್ ದ್ರಾವಿಡ್ ಕಾರಿಗೆ ಗುದ್ದಿದ ಗೂಡ್ಸ್ ಆಟೋ..! ದೂರು ನೀಡದ ಟೀಂ ಇಂಡಿಯಾದ ಮಾಜಿ ಕೋಚ್..!
ವಿಶ್ವದ ಪ್ರಭಾವಿ ರಾಷ್ಟ್ರಗಳ ಪಟ್ಟಿ ಬಿಡುಗಡೆ..! ಭಾರತಕ್ಕೆ ಎಷ್ಟನೇ ಸ್ಥಾನ..?
ಮಹಾ ಕುಂಭಮೇಳದಲ್ಲಿ ನರೇಂದ್ರ ಮೋದಿ ಪುಣ್ಯಸ್ನಾನ, ಸಂತರೊಂದಿಗೆ ಚರ್ಚಿಸಲಿರುವ ಪ್ರಧಾನಿ