ರಾಜಕೀಯವೈರಲ್ ನ್ಯೂಸ್

ಪ್ರಧಾನಿ ಮೋದಿಗೆ ಮೈಸೂರು ಪೇಟ ತೊಡಿಸಿ, ಅಂಬಾರಿ ಪ್ರತಿಕೃತಿ ನೀಡಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ – ಸಿಎಂ ಭೇಟಿಯ ಹಿಂದಿನ ಕಾರಣಗಳೇನು?

ನ್ಯೂಸ್‌ ನಾಟೌಟ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗುರುವಾರ ಭೇಟಿ ಮಾಡಿ, ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಪ್ರಧಾನಿ ಮೋದಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಪ್ರತಿಕೃತಿ ಕೊಟ್ಟು ಸನ್ಮಾಸಿದರು.

ಈ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು. ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇಂದು ಬೆಳಿಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ, ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು.

ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.ಈ ವೇಳೆ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ‌ ಪ್ರತಿನಿಧಿ ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು.

Related posts

ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ನಿತೀಶ್​-ತೇಜಸ್ವಿ..! ಎನ್.ಡಿ.ಎ ಮೈತ್ರಿ ನಾಯಕರನ್ನು ಸೆಳೆಯಲು ಹೊರಟಿತಾ ಕಾಂಗ್ರೆಸ್..?

ಕೊಂಬುಗಳಿರುವ 19ನೇ ಶತಮಾನದ ಮನುಷ್ಯನ ತಲೆ ಬುರುಡೆ ಹರಾಜು..! ಬ್ರಿಟನ್ ಸರ್ಕಾರದ ಕ್ರಮಕ್ಕೆ ನಾಗಾಲ್ಯಾಂಡ್ ಸಿಎಂ ತೀವ್ರ ವಿರೋಧ.!

ಇಂದು(ಎ.28) ಮೋದಿ-ಸಿದ್ದರಾಮಯ್ಯ ಏಕಕಾಲಕ್ಕೆ ಪ್ರಚಾರ..! ಕುತೂಹಲ ಮೂಡಿಸಿದ ಚುನಾವಣಾ ಅಖಾಡ