ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಇಂದು(ಮೇ.7) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆಗಳು ಪಾಕ್ ಮತ್ತು ಪಿಒಕೆ ಉಗ್ರರ ಅಡಗು ತಾಣಗಳ ಮೇಲೆ ನಡೆಸಿರುವ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾರತೀಯ ಸಶಸ್ತ್ರ ಪಡೆಗಳು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿ ನಡೆಸಿದ ಆಪರೇಷನ್ ಬಗ್ಗೆ ರಾಷ್ಟ್ರಪತಿಗೆ ವಿವರಿಸಿದ್ದಾರೆ. ಸರ್ಕಾರ ನಾಳೆ ಸರ್ವಪಕ್ಷ ಸಭೆಯನ್ನೂ ಕರೆದಿದೆ.
ಇಂದು ಮಧ್ಯಾಹ್ನದ ಬಳಿಕ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆದ ಪ್ರಧಾನಿ ಶೆಹಬಾಜ್ ಶರೀಫ್ , ಭಾರತದ ಪ್ರತೀಕಾರದ ದಾಳಿಯನ್ನ ತೀವ್ರವಾಗಿ ಖಂಡಿಸಿದ್ದಾರೆ. ಅಪ್ರಚೋದಿತ ಮತ್ತು ಕಾನೂನುಬಾಹಿರ ಯುದ್ಧ ಕೃತ್ಯ ಎಂದು ಕರೆದಿದ್ದಾರೆ. ಅಲ್ಲದೇ ಭಾರತದ ವಿರುದ್ಧ ದಾಳಿಗೆ ಸೇನೆಗೆ ಅಧಿಕಾರ ನೀಡಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಆಪರೇಷನ್ ಸಿಂಧೂರ: ಭಾರತ ಹೈ ಅಲರ್ಟ್, ಹಲವು ವಿಮಾನಗಳ ಸಂಚಾರ ರದ್ದು..! ಗಡಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!