ನವದೆಹಲಿ: ಚುನಾವಣೆ ಹೊಸ್ತಿಲಲ್ಲಿರುವ ಪಂಚ ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ತೆರವುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಶನಿವಾರ (ಜ. 8) ಪ್ರಕಟಿಸಿದೆ. ಇದರಿಂದಾಗಿ ಈ ಎಲ್ಲ ರಾಜ್ಯಗಳಲ್ಲಿ ಈಗಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದೆ.