ನ್ಯೂಸ್ ನಾಟೌಟ್: ನೂತನ ಸಂಸತ್ ಭವನದ ಉದ್ಘಾಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಂಚೆ ಚೀಟಿ ಮತ್ತು ₹75 ನಾಣ್ಯವನ್ನು ಬಿಡುಗಡೆ ಮಾಡಿದರು.
ನೂತನ ಸಂ ಸತ್ ಭವನದ ಲೋಕಸಭೆಯ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ ಕ್ರಮದಲ್ಲಿ ಅವರು ನಾಣ್ಯ ಮತ್ತು ಅಂಚೆ ಚೀಟಿ ಬಿಡುಗಡೆ ಮಾಡಿದರು. ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಆರ್ಥಿಕ ವ್ಯವಹಾರಗಳ ಇಲಾಖೆಯ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾಣ್ಯದ ತೂಕ 34.65 ರಿಂದ 35.35 ಗ್ರಾಂ ಇರಲಿದೆ. ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಚಿತ್ರವಿದೆ. ಅದರ ಸುತ್ತಲೂ ದೇವನಾಗರಿ ಲಿಪಿಯಲ್ಲಿ “ಭಾರತ್” ಮತ್ತು ಇಂಗ್ಲಿಷ್ ನಲ್ಲಿ “ಇಂಡಿಯಾ” ಎಂದು ಬರೆಯಲಾಗಿದೆ.