ರಾಜಕೀಯರಾಜ್ಯ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಗತ್ಯಬಿದ್ದರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ, ಗೃಹ ಸಚಿವ ಜಿ. ಪರಮೇಶ್ವರ್ ಸ್ಫೋಟಕ ಹೇಳಿಕೆ..? ಏನಿದು ಪ್ರಕರಣ..? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ನ್ಯೂಸ್ ನಾಟೌಟ್: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಿಎಂ ಯಡಿಯೂರಪ್ಪ ಭಾರಿ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ. ಈ ವಿಚಾರದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಕುತೂಹಲ ಕೆರಳಿಸಿದೆ.

ಈ ಪ್ರಕರಣದ ಬಗ್ಗೆ ಮಾಧ್ಯಮದೊಂದಿಗೆ ತುಮಕೂರಿನಲ್ಲಿ ಮಾತನಾಡಿರುವ ಡಾ. ಜಿ ಪರಮೇಶ್ವರ್, ‘ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ನೋಟಿಸ್ ಗೆ ಬಂದು ಉತ್ತರ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 15ರೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು ಎಂದು ಇದೆ. ಯಡಿಯೂರಪ್ಪನವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ. ಈ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಡಾ. ಜಿ ಪರಮೇಶ್ವರ್ ತಿಳಿಸಿದರು.

ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿರುವುದರ ಕುರಿತು ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ಈಗಾಗಲೇ ನೋಟಿಸ್ ಕೂಡ ನೀಡಿದ್ದಾರೆ. ಈ ಪ್ರಕರಣದ ಗಂಭೀರತೆಯನ್ನು ಅರಿತುಕೊಂಡಿರುವ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿ ಅರ್ಜಿಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಬಂದಿರುವ ನೋಟಿಸ್ ಗೆ ಉತ್ತರ ನೀಡಿರುವ ಯಡಿಯೂರಪ್ಪ ಅವರು ಜೂನ್ 17 ರಂದು ಬಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಮಾರ್ಚ್ 28 ರಂದು ನೀಡಿದ್ದ ನೋಟಿಸ್​​ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಸದ್ಯ ಸಿನಿಮಾ ಇಂಡಸ್ಟ್ರಿಯಲ್ಲಿ ಸಾಲು…ಸಾಲು ವಿವಾದಾತ್ಮಕ ಪ್ರಕರಣಗಳು ನಡೆಯುತ್ತಿವೆ. ಆ ಸಾಲಿಗೆ ಇದೀಗ ಯಡಿಯೂರಪ್ಪ ಪ್ರಕರಣಗಳು ಕೂಡ ಸೇರುವುದೇ ಅನ್ನುವುದನ್ನು ಕಾದು ನೋಡಬೇಕಿದೆ.

Related posts

ಶಾಸಕ ಮುನಿರತ್ನ ಮನೆಯಲ್ಲಿ ವಶಪಡಿಸಿಕೊಂಡ ಪೆನ್‌ ಡ್ರೈವ್‌ ನಲ್ಲಿ ಹಲವು ರಾಜಕೀಯ ನಾಯಕರ ಖಾಸಗಿ ವಿಡಿಯೋಗಳು ಪತ್ತೆ..! ಲ್ಯಾಪ್‌ಟಾಪ್‌, ಪೆನ್‌ಡ್ರೈವ್‌ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ..!

ಜನರ ಆಶೀರ್ವಾದದಿಂದ ನಿಸ್ವಾರ್ಥ ಸೇವೆ

ಬೆಳ್ತಂಗಡಿ: ಬಿಜೆಪಿ ಚುನಾವಣಾ ಪ್ರಚಾರ ವಾಹನ ವಶಕ್ಕೆ