ಕ್ರೈಂ

ಬೆಳ್ತಂಗಡಿ : ತಾನು ವಿಷ ಕುಡಿದು ತನ್ನ ಮಕ್ಕಳಿಗೆ ವಿಷ ಕುಡಿಸಿದ ಕುಡುಕ ತಂದೆ

973

ಬೆಳ್ತಂಗಡಿ : ವ್ಯಕ್ತಿಯೋರ್ವ ತಾನು ವಿಷ ಕುಡಿದು  ತನ್ನ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರಿಸಿಕೊಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ  ಬಾಳೆಗುಂಡಿಯಿಂದ ವರದಿಯಾಗಿದೆ. ಶಿಶಿಲ ಗ್ರಾಮದ ಬಾಳೆಗುಂಡಿ ನಿವಾಸಿ ವಿಶ್ವನಾಥ  ಈ ಕ್ರತ್ಯ ಎಸಗಿದ ವ್ಯಕ್ತಿ ಎಂದು ತಿಳಿದು ಬಂದಿದೆ. ವಿಶ್ವನಾಥ ಕುಡಿತದ ಚಟ ಹೊಂದಿದ್ದು, ಕುಡಿದು ಬಂದು ಪತ್ನಿ ಚಂದ್ರಾವತಿ ಜೊತೆ ಆಗಾಗ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ವಿಶ್ವನಾಥ ಅಪ್ರಾಪ್ತ ಮಕ್ಕಳಿಗೆ ಜ್ಯೂಸ್ ನೀಡಿದ್ದು, ಓರ್ವ ಮಗ ಜ್ಯೂಸ್ ಬೇಡವೆಂದು ನಿರಾಕರಿಸಿದ್ದಾನೆ. ಇನ್ನೋರ್ವ ಮಗನಿಗೆ ಒತ್ತಾಯ ಪೂರ್ವಕವಾಗಿ ಜ್ಯೂಸ್ ಕುಡಿಸಿದ್ದಾನೆ. ಈ ಬಗ್ಗೆ ಹೆಂಡತಿ ಪ್ರಶ್ನಿಸಿದಾಗ ವಿಶ್ವನಾಥ ‘ನಾನು ಜ್ಯೂಸ್ ನಲ್ಲಿ ಮಗನಿಗೆ ವಿಷ ಬೆರೆಸಿ ಕುಡಿಸಿದ್ದೇನೆ, ಅಷ್ಟೇ ಅಲ್ಲದೇ ನಾನು ಕೂಡ ವಿಷ ಕುಡಿದಿದ್ದೇನೆ’ ಎಂದು ಹೇಳಿದ್ದಾನೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

See also  ಯುವರಾಜ್ ಕುಮಾರ್ ಸಲ್ಲಿಸಿದ್ದ ಡಿವೋರ್ಸ್‌ ಕೇಸ್‌ ಮುಂದೂಡಿಕೆ..! ಪತ್ನಿ ಶ್ರೀದೇವಿ ಭೈರಪ್ಪರಿಂದ ಆಕ್ಷೇಪ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget