ಕರಾವಳಿಪುತ್ತೂರು

ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ

263

ನ್ಯೂಸ್ ನಾಟೌಟ್ :  ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ಅಳದಂಗಡಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.ಕಬಕ ಗ್ರಾಮದ ಅಳದಂಗಡಿ ನಿವಾಸಿ ದಿವಂಗತ ಚೆನ್ನಪ್ಪ ಗೌಡ ಮತ್ತು ಲೀಲಾವತಿ ದಂಪತಿ ಪುತ್ರ ಮನೋರಾಜ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮನೋರಾಜ್ ಅವರು ಮಂಗಳೂರಿನ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಸಂಸ್ಥೆಗೆ ಸಂಬಂಧಿಸಿದ ಸಂಗ್ರಹ ಹಣವನ್ನು ನೀಡದೆ ಬಾಕಿ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಇತ್ತೀಚೆಗೆ ಸಂಸ್ಥೆಯವರು ಕೆಲಸದಿಂದ ಕೈಬಿಟ್ಟಿದ್ದರು. ಈ ಹಿನ್ನಲೆಯಲ್ಲಿ ಮನನೊಂದ ಅವರು ಸೋಮವಾರ ವಿಷ ಸೇವಿಸಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾದರೂ ಆ ವೇಳೆಗೆ ಮೃತಪಟ್ಟಿದ್ದರು.ಪುತ್ತೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

See also  ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿ ಬೇಕರಿ ಕೆಲಸಗಾರ ಆತ್ಮಹತ್ಯೆ
  Ad Widget   Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget