Latestಕರಾವಳಿರಾಜಕೀಯರಾಜ್ಯ

ಶೀಘ್ರದಲ್ಲೇ 8,000 ಪೊಲೀಸ್ ಪೇದೆ ಹುದ್ದೆಗಳ ಭರ್ತಿಗೆ ತಯಾರಿ, ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ

144

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಕಳೆದ 5 ವರ್ಷದಲ್ಲಿ 8 ಸಾವಿರ ಪೊಲೀಸ್ ಪೇದೆ ಹುದ್ದೆ ಖಾಲಿ ಆಗಿದ್ದು, ಶೀಘ್ರದಲ್ಲೇ ಭರ್ತಿ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು.

ಕೊಪ್ಪಳದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವರು, “ಈ ಹಿಂದಿನ ಸರ್ಕಾರ ಯಾವುದೇ ನೇಮಕಾತಿ ಮಾಡಿಲ್ಲ. ಹೀಗಾಗಿ ಒಂದಷ್ಟು ಕಡೆ ಸಿಬ್ಬಂದಿ ಕೊರತೆಯಿರುವ ಬಗ್ಗೆ ಮಾಹಿತಿ ಇದೆ. ಈ ಹಿಂದಿನ ಸರ್ಕಾರವಿದ್ದಾಗ ನಡೆದ ಪಿಎಸ್‌ ಐ ಹಗರಣದಿಂದ ಯಾವುದೇ ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ನಡೆಯಲಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿ, ಈಗಾಗಲೇ 500 ಪಿಎಸ್‌ ಐ (PSI) ಹುದ್ದೆಗೆ ನೇಮಕಾತಿ ಮಾಡಿದೆ. ಇನ್ನೂ 500 ಪಿಎಸ್‌ ಐ ಹುದ್ದೆಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ, ಹೀಗೆ ಸುಮಾರು 8000 ಪೊಲೀಸ್ ಪೇದೆಗಳ ನೇಮಕ ಪ್ರಕ್ರಿಯೆ ನಿಧಾನವಾಗಿ ನಡೆಯಲಿದೆ ಎಂದು ಭರವಸೆ ನೀಡಿದರು.

ಜಿಲ್ಲಾ ನ್ಯಾಯಾಧೀಶರು ಕೊಪ್ಪಳ ಗಾಜಾಪಟ್ಟಿ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರು ಏನಾದರೂ ಹೇಳಿಕೊಳ್ಳಲಿ. ಅಕ್ರಮ ತಡೆಗೆ ಸರ್ಕಾರದಿಂದ ಎಲ್ಲ ರೀತಿಯ ಸೂಚನೆ ನೀಡಿದ್ದೇವೆ.

ರಾಜ್ಯಕ್ಕೆ ಪ್ರತಿದಿನ ಕೋಟ್ಯಂತರ ರೂ. ಡ್ರಗ್ಸ್ ಬರುತ್ತಿದೆ. ಕರ್ನಾಟಕ ಡ್ರಗ್ಸ್ ಮುಕ್ತ ಮಾಡಲು ಸರ್ಕಾರ ಮುಂದಾಗಿದೆ. ಆನೆಗೊಂದಿ ಭಾಗದಲ್ಲಿ ಡ್ರಗ್ಸ್ ತಡೆಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಆನೆಗೊಂದಿ ಭಾಗದಲ್ಲಿ ಪ್ರವಾಸಿ ಪೊಲೀಸ್ ಠಾಣೆ ಮಾಡುತ್ತೇವೆ. ರಾಯರೆಡ್ಡಿ ಅವರು ಆನೆಗೊಂದಿ ಕರ್ನಾಟಕದ ಡ್ರಗ್ಸ್ ಹಬ್ ಆಗಿದೆ ಎಂಬ ಸಲಹೆ ಹಾಗೂ ದೂರಿನ ಹಿನ್ನೆಲೆ ತಡೆಗೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಮುಕ್ತವಾಗಿ ಕೆಲಸ ಮಾಡಲು ಸೂಚಿಸಿದ್ದೇವೆ ಎಂದರು.

ಅಮೆರಿಕ ದಾಳಿ ಬಳಿಕ ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ಮೋದಿ ಮಾತುಕತೆ..! ಕುತೂಹಲ ಕೆರಳಿಸಿದ ಚರ್ಚೆ..!

See also  ಸುಳ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿದ ತಾಯಿ-ಮಗ..! 1 ವರ್ಷದ ಹಿಂದೆ ಮದುವೆಯಾಗಿದ್ದ ಮಗ ಸಾವು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget