ಕರಾವಳಿ

ಪುತ್ತೂರು ಮೂಲದ ಪೊಲೀಸ್ ಹೃದಯಾಘಾತಕ್ಕೆ ಬಲಿ

ನ್ಯೂಸ್ ನಾಟೌಟ್: ಪುತ್ತೂರು ಮೂಲದ ಹೆಡ್ ಕಾನ್ಸ್ಟೇಬಲ್ ವೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜಗನ್ನಾಥ್ ಅವರಿಗೆ 44 ವರ್ಷವಾಗಿತ್ತು. ಅವರು 2000ನೇ ಇಸವಿಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಸದ್ಯ ಹೆಡ್ ಕಾನ್ಸ್ಟೇಬಲ್ ಆಗಿ ಕೋಣಾಜೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ (ಆ.೬)ದಂದು ಕರ್ತವ್ಯದಲ್ಲಿದ್ದಾಗಲೇ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದರಾಗಿದ್ದರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಇತ್ತೀಚೆಗೆ ಹಲವಾರು ಪೊಲೀಸರು ಸಣ್ಣ ವಯಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕರ್ತವ್ಯದ ಒತ್ತಡದಿಂದ ಪೊಲೀಸರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿದೆ.

Related posts

ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ – ಶಾಲಾ ಕಾಲೇಜುಗಳಿಗೆ ನಾಳೆಯೂ(25.07) ರಜೆ ಘೋಷಣೆ

ಬಜಪೆ: ಹುಡುಗ-ಹುಡುಗಿ ಹಾಗೂ ‘ಬಾಂಬರ್ ಚಾಟ್’

ಸುಳ್ಯ:ಇತಿಹಾಸ ಪ್ರಸಿದ್ಧ ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ವಿಜೃಂಭಣೆಯ ಜಾತ್ರೋತ್ಸವ,ರಥೋತ್ಸವ ನೋಡಿ ಕಣ್ತುಂಬಿಕೊಂಡ ಭಕ್ತ ಸಾಗರ..!ಮಧ್ಯಾಹ್ನ ಮಹಾಪೂಜೆ,ಅನ್ನಸಂತರ್ಪಣೆ