ಮುಂಬೈ: ಮುಂಬೈ ನಗರದ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ನಾಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ ಅವರು ರಷ್ಯಾಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಪರಮ್ ಬೀರ್ ಸಿಂಗ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಪರಮ್ ಬೀರ್ ಸಿಂಗ್ ಎಲ್ಲಿದ್ದಾರೆ ಎನ್ನುವುದು ರಾಜ್ಯ ಸರ್ಕಾರ ಅಥವಾ ತನಿಖಾ ಸಂಸ್ಥೆಗಳಿಗೆ ತಿಳಿದಿಲ್ಲ. ಹಲವು ಬಾರಿ ನೋಟಿಸ್ ನೀಡಿದರೂ ತನಿಖಾ ಅಧಿಕಾರಿಗಳ ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಜೊತೆ ಅವರನ್ನು ಹುಡುಕುವ ಕೆಲಸ ಮಾಡುತ್ತಿದ್ದೇವೆ. ಸರ್ಕಾರಿ ಅಧಿಕಾರಿಯಾಗಿ, ಅವರು ಸರ್ಕಾರದ ಅನುಮತಿಯಿಲ್ಲದೆ ವಿದೇಶಕ್ಕೆ ಹೋಗಲು ಸಾಧ್ಯವಿಲ್ಲ ಎಂದರು.