ಕ್ರೈಂಬೆಂಗಳೂರುವೈರಲ್ ನ್ಯೂಸ್

ಪೊಲೀಸ್‌ ಸ್ಟೇಷನ್‌ ನೊಳಗೆ ಇನ್‌ ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದದ್ದೇಕೆ ಮಹಿಳೆ..? ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ ಐಆರ್

275

ನ್ಯೂಸ್ ನಾಟೌಟ್: ಪೊಲೀಸ್ ಠಾಣಾ ಆವರಣದಲ್ಲೇ ಮಹಿಳೆಯೊಬ್ಬಳು ಇನ್‌ಸ್ಪೆಕ್ಟರ್‌ಗೆ ಕಪಾಳಕ್ಕೆ ಹೊಡೆದದಿದ್ದಾಳೆ. ಸೈಟು ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಜ್ಞಾನಭಾರತಿ ಠಾಣೆಗೆ ಬಂದಿದ್ದರು.

ಈ ವೇಳೆ ಎರಡು ಗುಂಪುಗಳ ಸದಸ್ಯರು ಮಾತಿಗೆ ಮಾತು ಬೆಳೆಸಿ ಕಿತ್ತಾಡಲು ಮುಂದಾಗಿದ್ದರು. ಹೀಗಾಗಿ ಮಧ್ಯಪ್ರವೇಶಿಸಿ ಗಲಾಟೆ ಮಾಡದಂತೆ ಎಚ್ಚರಿಸಲು ಹೋದ ಇನ್‌ಸ್ಪೆಕ್ಟರ್‌ಗೆ ಮಹಿಳೆಯೊಬ್ಬಳು ಕಪಾಳಕ್ಕೆ ಹೊಡೆದಿದ್ದಾಳೆ ಎನ್ನಲಾಗಿದೆ. ನಿನ್ನೆ ಬುಧವಾರ(ಮೇ.1) ಸಂಜೆ ಬೆಂಗಳೂರಿನ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್‌ ರವಿ ಅವರಿಗೆ ಫೌಜೀಯಾ ಎಂಬಾಕೆ ಹಲ್ಲೆ ನಡೆಸಿದ್ದಾಳೆ.

ಫೌಜೀಯಾ ಹಾಗೂ ಇನ್ನೊಂದು ಗುಂಪು ಸೈಟು ವಿಚಾರಕ್ಕೆ ಜ್ಞಾನಭಾರತಿ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಠಾಣೆ ಆವರಣದಲ್ಲಿ ಎರಡು ಗುಂಪುಗಳು ಏರು ಧ್ವನಿಯಲ್ಲಿ ಕೂಗಾಡುತ್ತಾ ಮಾತನಾಡುತ್ತಿದ್ದರು. ಕರ್ತವ್ಯದಲ್ಲಿದ್ದ ಇನ್‌ಸ್ಪೆಕ್ಟರ್‌ ರವಿ ಎರಡು ಗುಂಪುಗಳಿಗೆ ಗಲಾಟೆ ಮಾಡದಂತೆ ವಾರ್ನಿಂಗ್‌ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಫೌಜೀಯ ಏಕಾಏಕಿ ಇನ್‌ಸ್ಪೆಕ್ಟರ್‌ ರವಿ ಅವರ ಕಪಾಳಕ್ಕೆ ಹೊಡೆದಿದ್ದಾಳೆ. ಮಾನವ ಹಕ್ಕುಗಳ ಸಂಘಟನೆಯಲ್ಲಿರುವ ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

See also  RTO ಬ್ರೋಕರ್ ಮನೆ ಮೇಲೆ ಲೋಕಾಯುಕ್ತ ದಾಳಿ..! ಎಂಟು ಜನ ಅಧಿಕಾರಿಗಳ ತಂಡದಿಂದ ದಾಖಲೆಗಳ ಹುಡುಕಾಟ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget