ಕರಾವಳಿಕ್ರೈಂರಾಜ್ಯವೈರಲ್ ನ್ಯೂಸ್

ಆರೋಪಿಯನ್ನು ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ವಾಹನದ ಮೇಲೆ ದಾಳಿ..! ಆರೋಪಿ ಪರಾರಿ, ಪೊಲೀಸರು ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ (Police) ಮೇಲೆಯೇ ದಾಳಿ ಮಾಡಿದ ಘಟನೆ ಗದಗದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ.

ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ. 392 ಕೇಸ್‌ನಲ್ಲಿ ಆರೋಪಿ ಅಮ್ಜದ್ ಅಲಿ ಗಂಗಾವತಿ ಶಹರ ಪೊಲೀಸರಿಗೆ ಬೇಕಿದ್ದ. ಈ ವೇಳೆ ಬಂದ ದುಷ್ಕರ್ಮಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಆರೋಪಿಯನ್ನು ಬಿಡಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಗೆ ಎಸ್.ಪಿ, ಬಿ.ಎಸ್ ನೇಮಗೌಡ, ಡಿವೈಎಸ್ಪಿ ಭೇಟಿ ನೀಡಿ ಗಾಯಾಳು ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ.

Related posts

ಭ್ರಷ್ಟ ತಹಶೀಲ್ದಾರ್ ಅಜಿತ್‌ ರೈ ಲಕ್ಸುರಿ ಬದುಕಿನ ರಹಸ್ಯ ಬಿಚ್ಚಿಟ್ಟ ಅಧಿಕಾರಿಗಳು! ಕೇವಲ ಮಕ್ಕಳ ಆಟದ ಸಾಮಾನುಗಳಿಗೇ ಲಕ್ಷ ಲಕ್ಷ ಬೆಲೆ! ಪುತ್ತೂರಿನ ಕುಬೇರನ ಸಾಮ್ರಾಜ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ

ಐವರ್ನಾಡಿನ ಹುಡುಗಿ ಭಾರತೀಯ ಸೈನ್ಯಕ್ಕೆ ಆಯ್ಕೆ

ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ಹೇಳಿ ಓಡಿದ ಪತಿ..! ಯೋಗಿ ಆದಿತ್ಯನಾಥ್ ಬಳಿ ದೂರು ಕೊಟ್ಟ ಪತ್ನಿ