ನ್ಯೂಸ್ ನಾಟೌಟ್:ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಪ್ರಕರಣದ ಕುರಿತು 5 ದಿನಗಳ ಹಿಂದೆ ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಳ್ಳಾರಿಯಿಂದ ಪೊಲೀಸರು ಆಗಮಿಸಿ ಬಂಧನಕ್ಕೆ ಮುಂದಾಗಿದ್ದು, ವಿಚಾರಣೆಗೆ ಸಹಕರಿಸೋದಾಗಿ ಭರವಸೆ ನೀಡಿದ್ಮೇಲೆ ನೋಟಿಸ್ ನೀಡಿ ಹಿಂದಿರುಗಿದ್ದಾರೆ ಎಂದು ಫೇಸ್‌ಬುಕ್ ಲೈವ್‌ನಲ್ಲಿ ಸಮೀರ್ ಹೇಳಿದ್ದಾರೆ.
ಸದ್ಯ ಆ ವಿಡಿಯೋ 13 ಮಿಲಿಯನ್ ವ್ಯೂವ್ ಪಡೆದುಕೊಂಡಿದೆ. “ಒಂದು ಮಿಲಿಯನ್ ವ್ಯೂವ್ ಪಡೆದುಕೊಳ್ಳುತ್ತಿದ್ದಂತೆ ನನಗೆ ಭಯ ಶುರುವಾಯ್ತು. ಕೆಲವರು ನನ್ನ ವೈಯಕ್ತಿಕ ಮಾಹಿತಿ ಮತ್ತು ನನ್ನ ವಿಳಾಸವನ್ನು ಸೋಶಿಯಲ್ ಮೀಡಿಯದಲ್ಲಿ ಲೀಕ್ ಮಾಡಿದ್ದರು. ನಂತರ ನನಗೆ ಹಲವು ಜೀವಬೆದರಿಕೆ ಕರೆಗಳ ಬರಲು ಆರಂಭಿಸಿದವು. ಪೊಲೀಸರ ಬಳಿ ಹೋದ್ರೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆಯೂ ನನಗಿರಲಿಲ್ಲ. ನಂತರ ನಾನು ಕೂಡಲೇ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಂಡದ ಸದಸ್ಯರನ್ನು ಸಂಪರ್ಕಿಸಿದೆ. ನಂತರ ಅವರೇ ವಕೀಲರ ಸಹಾಯವನ್ನು ನೀಡಿದ್ದಾರೆ” ಎಂದು ಸಮೀರ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಇನ್ನು ಇದೀಗ ಈ ವಿಡಿಯೋ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಈ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಜಿಲ್ಲಾ ಪೊಲೀಸ್ ವಿಭಾಗದಲ್ಲಿ ರಚನೆಯಾಗಿರುವ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳನ್ನು ಚುರುಕುಗೊಳಿಸುವಂತೆ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.ಸಮೀರ್ ಮಾಡಿರುವ ವಿಡಿಯೋ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರದೆ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ನಿರ್ಲಕ್ಷ್ಯ ವಹಿಸಿವೆ. ಈ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ – ವಿರೋಧದ ಚರ್ಚೆ ಹುಟ್ಟಿಕೊಂಡಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ ಎಂದು ಎಡಿಜಿಪಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.ಈ ನಿಟ್ಟಿನಲ್ಲಿ ಎಲ್ಲಾ ಪೊಲೀಸ್ ಘಟಕಗಳ ಸಾಮಾಜಿಕ ಜಾಲತಾಣಗಳ ನಿಗಾ ಘಟಕಗಳು ಚುರುಕಾಗಿ ಕೆಲಸ ಮಾಡಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆ ನಿಗಾ ವಹಿಸಬೇಕು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಕಟ್ಟುನಿಟ್ಟಿನ ಸೂಚನೆ ರವಾನಿಸಿದ್ದಾರೆ.
View this post on Instagram