ನ್ಯೂಸ್ ನಾಟೌಟ್: ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಪುತ್ರ ಸಹಿತ ಭಾಗಿಯಾಗಿದ್ದಾನೆ ಎಂಬ ಆರೋಪ ಬೆಳಗಾವಿಯಲ್ಲಿ ಕೇಳಿಬಂದಿದೆ. ಪೋಕ್ಸೋ ಕಾಯ್ದೆಯಡಿ ಪೊಲೀಸ್ ಅಧಿಕಾರಿ ಮಗ ಎ3 ಆಗಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸ್ ಅಧಿಕಾರಿಯ ಪುತ್ರ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಆರೋಪಿಗಳು ಬಾಲಕಿಯನ್ನು ಮಾರ್ಕೆಟ್ ಠಾಣಾ ವ್ಯಾಪ್ತಿಯಿಂದ ಕರೆದುಕೊಂಡು ಹೋದ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ಟಿಳಕವಾಡಿ ಪೊಲೀಸ್ ಠಾಣೆಯಿಂದ ಮಾರ್ಕೆಟ್ ಠಾಣೆಗೆ ವರ್ಗಾಯಿಸಿದ್ದಾರೆ.
ಆರೋಪಿಗಳು ಬಾಲಕಿಯ ಮೇಲೆ ಬೆಳಗಾವಿಯ ಹೊರವಲಯದ ರೆಸಾರ್ಟ್ ನಲ್ಲಿ ಅತ್ಯಾಚಾರವೆಸಗಿದ್ದಾರೆ. ಇಬ್ಬರು ಅಪ್ರಾಪ್ತರು ಸೇರಿ ಮೂವರಿಂದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಪ್ರಕರಣದ ಆರೋಪಿ ಸಾಕೀಬ್ ರೆಸಾರ್ಟ್ನಲ್ಲಿ ರೂಮ್ ಬುಕ್ ಮಾಡಿದ್ದನು. ಬಾಲಕಿಯ ಸ್ನೇಹಿತ ಆಕೆಯನ್ನು ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ರೆಸಾರ್ಟ್ಗೆ ಕರೆದುಕೊಂಡು ಹೋಗಿದ್ದಾನೆ.
ಬಳಿಕ, ರೂಮ್ ನಲ್ಲಿ ಮೂವರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಮನೆಗೆ ವಾಪಸಾದಾಗ ಹೊಟ್ಟೆ ನೋವು ಎಂದು ಪೋಷಕರಿಗೆ ಹೇಳಿದ್ದಾಳೆ. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಟಿಳಕವಾಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಸಾಕೀಬ್ ಮತ್ತು ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮತ್ತೋರ್ವ ಆರೋಪಿ, ಪೊಲೀಸ್ ಅಧಿಕಾರಿ ಪುತ್ರನಿಗಾಗಿ ಹುಡುಕಾಟ ನಡೆಯುತ್ತಿದೆ.
ಜೈಲಿನಲ್ಲಿ ಮಾದಕ ವಸ್ತು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಬೆಕ್ಕು ಪೊಲೀಸ್ ವಶಕ್ಕೆ..! ಏನಿದು ವಿಚಿತ್ರ ಪ್ರಕರಣ..?
25 ವರ್ಷಗಳಿಂದ ದರ್ಶನ್ ಮೇಕಪ್ ಆರ್ಟಿಸ್ಟ್ ಆಗಿದ್ದ ಹೊನ್ನೆಗೌಡ ನಿಧನ..! ಭಾವುಕ ಪೋಸ್ಟ್ ಹಂಚಿಕೊಂಡ ದಾಸ..!