ಕ್ರೈಂಬೆಂಗಳೂರುವೈರಲ್ ನ್ಯೂಸ್

ಯುವಕನ ಕೈ ಕತ್ತರಿಸಿದ ರೌಡಿಶೀಟರ್‌ಗಳು..! ಪೊಲೀಸರಿಂದ ಗುಂಡೇಟು, ಆರೋಪಿಗಳು ಆಸ್ಪತ್ರೆಗೆ ದಾಖಲು..!

33
Spread the love

ನ್ಯೂಸ್ ನಾಟೌಟ್: ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ಗಳ ಮೇಲೆ ಕನಕಪುರ ನಗರ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಜು.28 ರಂದು ಬೆಂಗಳೂರಿನ ರಾಮನಗರದಲ್ಲಿ ನಡೆದಿದೆ.

ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಮೇಲೆ ಗುಂಡಿನ ದಾಳಿ ನಡೆಸಿ ಸಿಪಿಐ ಮಿಥುನ್ ಶಿಲ್ಪಿ ಹಾಗೂ ಪಿಎಸ್‌ಐ ಮನೋಹರ್ ಬಂಧಿಸಿದ್ದಾರೆ. ಇಂದು ಖಚಿತ ಮಾಹಿತಿ ಪಡೆದು ಇಂದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

ಇವರು ಇತ್ತೀಚೆಗೆ ದಲಿತ ಯುವಕನೋರ್ವನ ಕೈ ಕತ್ತರಿಸಿದ್ದ ಪ್ರಕರಣ ನಡೆದಿತ್ತು. ಆರೋಪಿಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಕುಮಾರ್ ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

See also  ಪೊಲೀಸ್‌ ಸ್ಟೇಷನ್‌ ನೊಳಗೆ ಇನ್‌ ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದದ್ದೇಕೆ ಮಹಿಳೆ..? ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ ಐಆರ್
  Ad Widget   Ad Widget   Ad Widget