Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಕಾರು ಹತ್ತಿಸಿದ ವ್ಯಕ್ತಿ..! ಮಹಿಳಾ ಕಾನ್ ಸ್ಟೇಬಲ್ ಸಾವು, ಇಬ್ಬರು ಇನ್ಸ್‌ ಪೆಕ್ಟರ್‌ ಗಳಿಗೆ ಗಂಭೀರ ಗಾಯ..!

688

ನ್ಯೂಸ್ ನಾಟೌಟ್: ಅತೀ ವೇಗವಾಗಿ ಬಂದ ಎಸ್ ಯುವಿ ಕಾರೊಂದು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹರಿದ ಪರಿಣಾಮ ಓರ್ವ ಮಹಿಳಾ ಕಾನ್ ಸ್ಟೇಬಲ್ ಮೃತಪಟ್ಟು ಇಬ್ಬರು ಇನ್ಸ್‌ ಪೆಕ್ಟರ್‌ ಗಳು ಗಂಭೀರ ಗಾಯಗೊಂಡಿರುವ ಘಟನೆ ಪಾಟ್ನಾದ ಅಟಲ್ ಪಥ್ ನಲ್ಲಿ ಬುಧವಾರ(ಜೂ.11) ತಡರಾತ್ರಿ ನಡೆದಿದೆ.

ಅಟಲ್ ಪಥ್ ನಲ್ಲಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಹರಿದಿದೆ ಈ ವೇಳೆ ಮೂವರು ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳಾ ಕಾನ್ ಸ್ಟೇಬಲ್ ಕೋಮಲ್ ಕುಮಾರಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು ಈ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಪೊಲೀಸರ ಮೇಲೆ ಹರಿದಿದೆ ಅಲ್ಲದೆ ಕೆಲ ಪೊಲೀಸ್ ಸಿಬ್ಬಂದಿಗಳು ಓಡಿ ಜೀವ ಉಳಿಸಿಕೊಂಡಿದ್ದಾರೆ ಘಟನೆ ದೃಶ್ಯ ಅಲ್ಲಿನ ಪೊಲೀಸರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

ಅಪಘಾತದ ವೇಳೆ ಕಾರಿನೊಳಗೆ ಇದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಅಲ್ಲದೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದನಿಗೆ ಹೃದಯಘಾತ..! ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನಿಧನ..!

ಮಂಗಳೂರು :ಈ ಹಿಂದಿನ ಪೊಲೀಸ್ ಕಮಿಷನರ್ ಮತ್ತು ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದ ಯು.ಟಿ.ಖಾದರ್..! ಎನಿದು ಆರೋಪ..?

See also  ಮೈಸೂರು: ಒಂದೇ ಕುಟುಂಬದ ನಾಲ್ವರು ಸಾವು,ಮೂವರಿಗೆ ವಿಷವುಣಿಸಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ,ಡೆತ್‌ನೋಟ್‌ನಲ್ಲಿ ಬರೆದಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget