Uncategorizedರಾಜಕೀಯ

ಕಿಚ್ಚ ಸುದೀಪ್ ಅವರನ್ನು ಭೇಟಿಯಾದ ಡಿಕೆಶಿ,ರಾಜಕೀಯ ಚರ್ಚೆಗಳಿಗೆ ಕಾರಣವಾದ ಫೋಟೊ ವೈರಲ್

ನ್ಯೂಸ್ ನಾಟೌಟ್ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ನಡುವೆ ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಈ ಕುರಿತ ಸುದ್ದಿ ಬಾರಿ ವೈರಲ್ ಆಗಿತ್ತು.ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಟ ಕಿಚ್ಚ ಸುದೀಪ್ ಭೇಟಿಯಾಗಿದ್ದು, ಈ ಫೋಟೋ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದೆ.

ಈ ಹಿಂದೆ ಕಿಚ್ಚ ಸುದೀಪ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹರಿದಾಡಿತ್ತು.ಅದಾದ ಬಳಿಕ ಕಾಂಗ್ರೆಸ್ ಗೆ ಸುದೀಪ್ ಅವರು ಆಗಮಿಸುತ್ತಾರೆ ಎಂಬುದರ ಕುರಿತು ಚರ್ಚೆಗಳು ನಡೆದಿದ್ದವು.ಇದೀಗ ಖಾಸಗಿ ಹೋಟೆಲ್ ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಕಿಚ್ಚ ಸುದೀಪ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಒಟ್ಟಿಗೆ ಊಟ ಮಾಡಿದ್ದಾರೆ. ಈ ವೇಳೆ ಚುನಾವಣಾ ಪ್ರಚಾರ ಸಭೆಗಳಿಗೆ ಬರುವಂತೆ ಕಿಚ್ಚ ಸುದೀಪ್ ಗೆ ಡಿ.ಕೆ. ಶಿವಕುಮಾರ್ ಆಹ್ವಾನಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸುದೀಪ್ ಏನು ಹೇಳಿದ್ದಾರೆಂದು ಇನ್ನು ಬಹಿರಂಗಗೊಂಡಿಲ್ಲ.

ಒಂದು ವೇಳೆ ಕಾಂಗ್ರೆಸ್ ಗೆ ಸುದೀಪ್ ಆಗಮಿಸಿದರೆ ವಾಲ್ಮೀಕಿ ಮತಗಳನ್ನು ತನ್ನತ್ತ ಸೆಳೆಯಲು ಸಹಕಾರವಾಗುತ್ತದೆ ಎಂಬ ಲೆಕ್ಕಚಾರದಲ್ಲಿ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಆಹ್ವಾನಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಕಿಚ್ಚ ನ ನಿರ್ಧಾರ ಕುತೂಹಲ ಮೂಡಿಸಿರುವುದಂತು ಸುಳ್ಳಲ್ಲ.

Related posts

ಬೆಳ್ಳಾರೆ: ಜ್ಞಾನದೀಪ ಮೊಂಟೆಸ್ಸರಿಯಿಂದ ಶಿಕ್ಷಕಿಯರ ತರಬೇತಿಗೆ ಅರ್ಜಿ ಆಹ್ವಾನ, ಅಭ್ಯರ್ಥಿಗಳಿಗಿರಬೇಕಾದ ಅರ್ಹತೆಗಳೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

ಶಾಸಕ ಮುನಿರತ್ನ ಅವರ ಇನ್ನೂ 2 ಆಡಿಯೋಗಳು ನಾಳೆ ರಿಲೀಸ್..? ಗುತ್ತಿಗೆದಾರನಿಂದ ಸ್ಫೋಟಕ ಹೇಳಿಕೆ..!

ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮತ್ತೆ ಮದುವೆಯಾದ ತರುಣ್‌, ಸೋನಲ್‌..! ಇಲ್ಲಿದೆ ಸಂಪೂರ್ಣ ಮಾಹಿತಿ