ಕರಾವಳಿಕ್ರೀಡೆ/ಸಿನಿಮಾವೈರಲ್ ನ್ಯೂಸ್

ನಟಿ ಪೂಜಾ ಹೆಗ್ಡೆ ಮದುವೆಯಂತೆ..? ಕರಾವಳಿ ಕುವರಿ ಮನ ಗೆದ್ದ ಯಾರು ಆ ಖ್ಯಾತ ಕ್ರಿಕೆಟಿಗ?

186

ನ್ಯೂಸ್ ನಾಟೌಟ್: ಮಂಗಳೂರಿನ ಬೆಡಗಿ ನಟಿ ಪೂಜಾ ಹೆಗ್ಡೆ (Pooja Hegde) ಸತತ ಸಿನಿಮಾ ಫ್ಲಾಪ್‌ಗಳ ನಂತರ ಖ್ಯಾತ ಕ್ರಿಕೆಟಿಗನ ಜೊತೆ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಖ್ಯಾತ ಕ್ರಿಕೆಟಿಗನ (Cricketer) ಜೊತೆ ಪೂಜಾ ಹೊಸ ಬಾಳಿಗೆ (Wedding) ಕಾಲಿಡಲು ನಿರ್ಧರಿಸಿದ್ದಾರೆ ಎಂದು ವರದಿ ತಿಳಿಸಿದ್ದು, ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದೆ.

ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ. ಅಷ್ಟಕ್ಕೂ ಈ ಸುದ್ದಿ ನಿಜಾನಾ? ಈ ಬಗ್ಗೆ ನಟಿ ಕೂಡ ಯಾವುದೇ ಸ್ಪಷ್ಟನೆ ನೀಡಿಲ್ಲ.
ಸಾಲು ಸಾಲು ಸಿನಿಮಾಗಳ ಸೋಲಿನ ಬೆನ್ನಲ್ಲೇ ಹಸೆಮಣೆ ಏರಲು ರೆಡಿಯಾದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಕರಾವಳಿ ಕುವರಿ ಪೂಜಾ, ಸೌತ್- ಬಾಲಿವುಡ್ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಹೊಸ ಸಿನಿಮಾ ಆಫರ್‌ಗಾಗಿ ಎದುರು ನೋಡುತ್ತಿದ್ದಾರೆ ಎನ್ನಲಾಗಿದೆ.

See also  ಬೆಳ್ತಂಗಡಿ: ಪತ್ನಿ,ಮಗನನ್ನು ರಕ್ಷಿಸಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget