ಕ್ರೀಡೆ/ಸಿನಿಮಾಕ್ರೈಂವೈರಲ್ ನ್ಯೂಸ್

Poonam Pandey:ಖ್ಯಾತ ನಟಿ ಪೂನಂ ಪಾಂಡೆ ಕ್ಯಾನ್ಸರ್​ನಿಂದ ನಿಧನ, ಕೇವಲ 32 ವರ್ಷಕ್ಕೆ ದುರಂತ ಅಂತ್ಯ!

212

ನ್ಯೂಸ್ ನಾಟೌಟ್: ಪೂನಂ ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

ಜನಪ್ರಿಯ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಇವರು ಸಿನಿಮಾಗಳ ಜೊತೆಗೆ ವಿವಾದಗಳಿಂದಲೂ ಸುದ್ದಿಯಾಗುತ್ತಿದ್ದರು.

ಶುಕ್ರವಾರ (ಫೆಬ್ರವರಿ 2) ಮುಂಜಾನೆ ಕೊನೆಯುಸಿರೆಳೆದಿದ್ದು, ಈಕೆ ಕ್ಯಾನ್ಸರ್​ನಿಂದ ನಿಧನರಾಗಿರುವುದಾಗಿ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.
ಉತ್ತರ ಪ್ರದೇಶದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಈಕೆಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅಭಿಮಾನಿಗಳಿಗೆ ಶಾಕ್ ನೀಡಿದೆ.

ಪೂನಂ ಪಾಂಡೆ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ‘ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

See also  ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ! ಶಿವಮೊಗ್ಗಕ್ಕೆ BJP ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಎಂದದ್ದೇಕೆ ಕಾಂಗ್ರೆಸ್?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget