ನ್ಯೂಸ್ ನಾಟೌಟ್: ಹಲವಾರು ವಿಚಾರಗಳಿಂದ ಸದ್ದು ಮಾಡಿರುವ ಖ್ಯಾತ ನಟಿ, ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಬಿಸಿಬಿಸಿ ಚರ್ಚೆಯಲ್ಲಿರುವ ಹಿಜಾಬ್ ಧರಿಸಿ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಜಾಬ್ ಧರಿಸಿ ಪೋಸ್ ಕೊಟ್ಟಿರುವ ಫೋಟೋವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. ಮಾತ್ರವಲ್ಲ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಇದಕ್ಕೆ ಭಾರಿ ಸಂಖ್ಯೆಯಲ್ಲಿ ಲೈಕ್ಸ್, ಕಾಮೆಂಟ್ಸ್ ಸಿಕ್ಕಿವೆ. ಇಡೀ ದೇಶದಲ್ಲಿ ಶಾಲಾ-ಕಾಲೇಜಿನಲ್ಲಿ ಹಿಜಾಬ್ ಕುರಿತ ಚರ್ಚೆ ನಡೆಯುತ್ತಿರುವಾಗಲೇ ರಶ್ಮಿಕಾ ಮಂದಣ್ಣ ಹಿಜಾಬ್ ಧರಿಸಿರುವುದರ ಹಿಂದೆ ಏನಾದರೂ ಉದ್ದೇಶ ಅಡಗಿದೆಯೇ ಎಂದು ಅಭಿಮಾನಿಗಳು ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.ವಿಶೇಷವೆಂದರೆ ಸಿನಿಮಾವೊಂದರ ಪ್ರಮೋಶನ್ ಗೆ ಅವರು ಈ ರೀತಿಯ ಧಿರಿಸು ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
previous post
next post