ನ್ಯೂಸ್ ನಾಟೌಟ್: ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಕ್ರೈಮ್ ನಂಬರ್ 20ರಲ್ಲಿ ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ.
ಕೆ.ಆರ್ ನಗರದ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸಹ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದ್ದಾರೆ, ಆರೋಪ ಓದಿ ಹೇಳುವಾಗ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ ಘಟನೆ ಇಂದು ನಡೆದಿದೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಸೌದಿ ಪ್ರವಾಸದಲ್ಲಿರುವ ಮೋದಿಗೆ ಆಗಸದಲ್ಲಿ ಯುದ್ಧ ವಿಮಾನಗಳಿಂದ ಸ್ವಾಗತ..! ಇಲ್ಲಿದೆ ವಿಡಿಯೋ