ಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

Prajwal Revanna: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಸಚಿವ ಜಮೀರ್ ಆಪ್ತನ ಬಂಧನ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಹರಿಬಿಟ್ಟವರನ್ನು ಇಂದು(ಮೇ.28) ಬಂಧಿಸಿದೆ ಎಂದು ವರದಿ ತಿಳಿಸಿದೆ. ಹೈಕೋರ್ಟ್​​ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್​ನನ್ನು ಎಸ್​ಐಟಿ ಬಂಧಿಸಿದೆ. ವಿಡಿಯೋ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದರಲ್ಲಿ ಕಾಂಗ್ರೆಸ್ ನಾಯಕರುಗಳ ಜೊತೆ ಗುರುತಿಸಿಕೊಂಡವರನ್ನು ಬಂಧಿಸಲಾಗಿಲ್ಲ ಎಂದು ಆರೋಪಿಸಲಾಗಿತ್ತು. ಈಗ ಸಚಿವ ಜಮೀರ್ ಅಹಮ್ಮದ್ ಆಪ್ತ ಎನ್ನಲಾದ ವ್ಯಕ್ತಿಯನ್ನು ವಿಡಿಯೋ ಹಂಚಿಕೆ ಆರೋಪದ ಮೇಲೆ ಬಂಧಿಸಲಾಗಿದೆ.. ಪ್ರಜ್ವಲ್ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ಈ ವಿಡಿಯೋವನ್ನ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ವೈರಲ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಈ ನವೀನ್‌ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಈಗ ಬಂಧನವಾಗಿದ್ದು ಈ ಪ್ರಕರಣಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.

Click 👇

https://newsnotout.com/2024/05/kiccha-in-tulunadu-and-speech-kannada-news
https://newsnotout.com/2024/05/mangaluru-namaz-on-public-road-issue
https://newsnotout.com/2024/05/kashmir-and-flood-in-river-and-baby-issue

Related posts

ಡಿಕೆಶಿ, ಸಿದ್ದು ವಿರುದ್ಧ ಕೇರಳದಲ್ಲಿ ಮಾಟ ಮಂತ್ರ ಪ್ರಯೋಗ..!, ಶತ್ರುಭೈರವಿ ಯಾಗ, ಪ್ರಾಣಿ ಬಲಿ ನಡೆದಿಲ್ಲ ಕೇರಳ ಸರ್ಕಾರ ಸ್ಪಷ್ಟನೆ

ಕಲ್ಲುಗುಂಡಿ: ಕಡಪಾಲದಲ್ಲಿ ಸರಣಿ ಅಪಘಾತ, ಮಿನಿ ಜೀಪ್, ಬೈಕ್ ಗೆ ಡಿಕ್ಕಿ ಹೊಡೆದ ಕಾರು, ಬೈಕ್ ಸವಾರನಿಗೆ ಗಾಯ

ರಿಕ್ಷಾ-ಕಾರು ಅಪಘಾತದ ಗಾಯಾಳು ಚಿಕಿತ್ಸೆಗೆ ಸ್ಪಂದಿಸದೆ ಸಾವು