ಕ್ರೈಂರಾಜಕೀಯವೈರಲ್ ನ್ಯೂಸ್

ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹನ ಬಂಧನವಾದದ್ದೇಕೆ..? 5 ಅರಣ್ಯಧಿಕಾರಿಗಳು ಅಮಾನತ್ತಾದದ್ದೇಕೆ?

257

ನ್ಯೂಸ್ ನಾಟೌಟ್ : ಮರಗಳನ್ನು ಅಕ್ರಮವಾಗಿ ಕಡಿದು ಅವುಗಳನ್ನು ಸಾಗಾಣಿಕೆ ಮಾಡಿರುವ ಆರೋಪದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಶನಿವಾರ(ಡಿ.31) ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ ಸರ್ಕಾರಿ ಜಮೀನಿನಲ್ಲಿದ್ದ 126 ಮರಗಳನ್ನು ಅಕ್ರಮವಾಗಿ ಕಡಿದು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

ಬೇಲೂರು ತಹಶೀಲ್ದಾರ್ ಮಮತಾ ವರದಿ ಮೇರೆಗೆ ಡಿ.16ರಂದು ಅರಣ್ಯ ಇಲಾಖೆಗೆ ಮರ ಕಡಿದ ವಿಷಯ ಗೊತ್ತಾಗಿತ್ತು. ಶುಂಠಿ ಕೃಷಿ ಮಾಡಲು ಮರಗಳನ್ನು ಕಡಿಯಲಾಗಿದೆ ಎಂದು ತಹಶೀಲ್ದಾರ್ ಹೇಳಿದ್ದರು ಎನ್ನಲಾಗಿದ್ದು, ಬಳಿಕ ವಿಕ್ರಂ ತಲೆಮರೆಸಿಕೊಂಡಿದ್ದರು. ವಿಕ್ರಮ್ ಸಿಂಹ ಆರಂಭದಲ್ಲಿ ತನಿಖಾ ಅಧಿಕಾರಿ ಮುಂದೆ ಹೇಳಿಕೆಗೆ ಹಾಜರಾಗಿದ್ದರು ಆದರೆ ಹೆಚ್ಚಿನ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಆರೋಪದಡಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ ಮೋಹನ್ ಕುಮಾರ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ.

ವಿಕ್ರಮ್ ಸಿಂಹಗಾಗಿ ಅರಣ್ಯಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ಬೆಂಗಳೂರಿನಲ್ಲಿ ಇರುವ ಮಾಹಿತಿ ಪಡೆದ ಅಧಿಕಾರಿಗಳು, ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲೇ ಇರುವ ಜಾರುಬಂಡೆ ಕಾವಲ್‌ನಲ್ಲಿರುವ ಅರಣ್ಯ ಕೇಂದ್ರದಲ್ಲಿ ವಿಚಾರಣೆಗಾಗಿ ಕರೆದೊಯ್ಯಲಾಗಿತ್ತು. ನಂತರ ಆತನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಸದ್ಯ ಅವರನ್ನು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅರಣ್ಯ ಕೇಂದ್ರದಲ್ಲಿ ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಹಾಸನ) ಪ್ರಭುಗೌಡ ಬಿರಾದಾರ್ ಮತ್ತು ಎಸಿಪಿ (ಕ್ರೈಂ ಸೆಲ್) ಬೆಂಗಳೂರು ನೇತೃತ್ವದ ಜಂಟಿ ತಂಡವು ವಿಕ್ರಮ್ ಸಿಂಹನನ್ನು ಬೆಂಗಳೂರಿನಲ್ಲಿ ಬಂಧಿಸಿದೆ.

See also  ಗೋವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪಿಗಳು ಅರೆಸ್ಟ್..! ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget