ನ್ಯೂಸ್‌ನಾಟೌಟ್: ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್’ ನಿಲಯದ ಗೃಹ ಪ್ರವೇಶ ಇಂದು ನಡೆಯಿತು.
ಬೆಳಗ್ಗೆ ಗಣಪತಿ ಹೋಮ ನಡೆದು ವಿವಿಧ ವಿಧಿ ವಿಧಾನಗಳೊಂದಿಗೆ ಗೃಹ ಪ್ರವೇಶ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಪ್ರವೀಣ್ ನೆಟ್ಟಾರು ತಂದೆ ಶೇಖರ್ ಪೂಜಾರಿ, ತಾಯಿ ರತ್ನಾವತಿ, ಪ್ರವೀಣ್ ಪತ್ನಿ ನೂತನ ಹಾಗೂ ಕುಟುಂಬಸ್ಥರು, ಪ್ರವೀಣ್ ಸ್ನೇಹಿತರು ಪಾಲ್ಗೊಂಡಿದ್ದರು.