ಕರಾವಳಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧಿಸಿದ ಎನ್ಐಎ

343

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೆ ಮೂವರನ್ನು ಬಂಧಿಸಿದೆ.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎನ್ನುವವರನ್ನು ಬಂಧಿಸಲಾಗಿದೆ. ಮೊನ್ನೆಯಷ್ಟೇ ಎನ್‌ಐಎ ತನಿಖಾಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದರು. ಈ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಮಂದಿಯನ್ನು ಬಂಧಿಸಬಹುದು ಅನ್ನುವ ನಿರೀಕ್ಷೆ ಇದೆ. ಈ ಪ್ರಕರಣದಲ್ಲಿ ಭಾರಿ ಪ್ರಮಾಣದಲ್ಲಿ ಜನರನ್ನು ಪೊಲೀಸರು ಬಂಧಿಸಿರುವುದು ವಿಶೇಷ.

See also  ಸುಳ್ಯ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೃತಪಟ್ಟ ಪಾದಾಚಾರಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget