ಕರಾವಳಿಕೊಡಗುಕ್ರೈಂಪುತ್ತೂರುಸುಳ್ಯ

ಪ್ರವೀಣ್‌ ನೆಟ್ಟಾರು ಹತ್ಯೆಯ ಮೋಸ್ಟ್‌ ವಾಂಟೆಡ್‌ ಆರೋಪಿ ಕೊನೆಗೂ ಸೆರೆ

372


ನ್ಯೂಸ್‌ನಾಟೌಟ್‌: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ನಿಷೇಧಿತ ಪಿಎಫ್‌ಐ ಸಂಘಟನೆಯ ಮೋಸ್ಟ್ ವಾಂಟೆಡ್‌ ಮುಖಂಡ ಮಡಿಕೇರಿ ಮೂಲದ ತುಫೈಲ್‌ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಶನಿವಾರ ತಡರಾತ್ರಿ ಬಂಧಿಸಿದ್ದಾರೆ
ಎಂದು ಕನ್ನಡದ ವೆಬ್‌ಸೈಟ್‌ವೊಂದು ವರದಿ ಮಾಡಿದೆ.


ಭಾರಿ ಸುದ್ದಿಯಾಗಿದ್ದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈತ ಭಾಗಿಯಾಗಿದ್ದು, ಇವನ ಪತ್ತೆಗಾಗಿ ಹಲವು ದಿನಗಳಿಂದ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದರು. ಆದರೆ ಪೊಲೀಸರು ಮತ್ತು ಎನ್‌ಐಎ ಅಧಿಕಾರಿಗಳ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ. ನಿನ್ನೆ ತಡರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರಹಸ್ಯವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿ ಸೆರೆಯಾಗಿದ್ದಾನೆ.

ಈತನ ಹುಡುಕಾಟ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಪತ್ತೆಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ನೋಟಿಸ್ ಕೂಡ ಅಂಟಿಸಿದ್ದರು. ತುಫೈಲ್‌ ಮಾಹಿತಿ ನೀಡಿದವರಿಗಾಗಿ ಐದು ಲಕ್ಷ ಬಹುಮಾನ ಕೂಡ ಘೋಷಿಸಲಾಗಿತ್ತು.

See also  ಗೋಳಿತೊಟ್ಟು -ಕೊಕ್ಕಡ ಹದಗೆಟ್ಟ ರಸ್ತೆ: ವರದಿ ತರಿಸಿಕೊಂಡು ಉತ್ತರಿಸುವೆ: ಎಸ್. ಅಂಗಾರ ನ್ಯೂಸ್ ನಾಟೌಟ್ ಗೆ ಪ್ರತಿಕ್ರಿಯೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget