ಕರಾವಳಿಪುತ್ತೂರುಸುಳ್ಯ

ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಉದ್ಯೋಗದಿಂದ ಬಿಡುಗಡೆ..!

259

ನ್ಯೂಸ್ ನಾಟೌಟ್: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರನ್ನು ಕೆಲಸದಿಂದ ಬಿಡುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ.

ಕಳೆದ ಜುಲೈ 26 ರಂದು ರಾತ್ರಿ ದುಷ್ಕರ್ಮಿಗಳಿಂದ ಪ್ರವೀಣ್‌ ನೆಟ್ಟಾರು ಅವರ ಹತ್ಯೆಯಾಗಿತ್ತು. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಆಗಿನ ಸಿಎಂ ಬೊಮ್ಮಾಯಿ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ಸೆ.22ರಂದು ಆದೇಶ ಹೊರಡಿಸಲಾಗಿತ್ತು., ಆದರೆ ಅವರ ವಿನಂತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಕೆಳೆದ ಅಕ್ಟೋಬರ್‌ 14ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು. ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ಆದರೆ ಇದೀಗ ಸರ್ಕಾರ ಬದಲಾಗಿದ್ದು, ನೂತನ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ.

See also  ಸುಳ್ಯ ಪೊಲೀಸ್ ಠಾಣೆಗೆ ಹೊಸ ASI, ಯಾರಿವರು ಅಧಿಕಾರಿ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget