ಕ್ರೈಂವೈರಲ್ ನ್ಯೂಸ್ಸುಳ್ಯ

ಬೆಳ್ಳಾರೆ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ, ವಿದೇಶದಿಂದ ಬರುತ್ತಿದ್ದಾಗ ಸೆರೆಹಿಡಿದ ಎನ್ ಐಎ ಅಧಿಕಾರಿಗಳು

215

ನ್ಯೂಸ್ ನಾಟೌಟ್: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳದ ಕೊಡಾಜೆಯ ನಿವಾಸಿ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಪ್ರಕರಣದ 6ನೇ ಆರೋಪಿಯಾಗಿದ್ದಾನೆ. ಈತ ವಿದೇಶದಿಂದ ಭಾರತಕ್ಕೆ ಆಗಮಿಸಿದ್ದಾಗ ಎನ್ ಐಎ ಬಲೆಗೆ ಬಿದ್ದಿದ್ದಾನೆಂದು ಪೊಲೀಸ್ ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ.

See also  ವಿಶ್ವಕಪ್ ಪಂದ್ಯದ ವೇಳೆ ಭಾರತದ ರಾಷ್ಟ್ರ ಧ‍್ವಜಕ್ಕೆ ಅವಮಾನಿಸಿದ ಅಧಿಕಾರಿ! ಚೆನ್ನೈ ಪೊಲೀಸ್ ಅಧಿಕಾರಿ ರಾಷ್ಟ್ರ ಧ್ವಜಗಳನ್ನು ಕಸದ ಡಬ್ಬಿಗೆ ಹಾಕಿದ್ದೇಕೆ? ಇಲ್ಲಿದೆ ವಿಡಿಯೋ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget