ಕ್ರೈಂ

ಕುಂಭ ಮೇಳ ಕಾಲ್ತುಳಿತದ ಹಿಂದೆ ಕಾಣದ ಕೈಗಳ ಕೈವಾಡ?16 ಸಾವಿರ ಮೊಬೈಲ್‌ಗಳ ಪೈಕಿ ಬಹುತೇಕ ಸ್ವಿಚ್‌ ಆಫ್‌ ಆಗಿದ್ದೇಕೆ?

ನ್ಯೂಸ್‌ ನಾಟೌಟ್‌ : ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿಂದೆ ದೊಡ್ಡ ಸಂಚು ಇದ್ಯಾ ಅನ್ನೋ ಬಗ್ಗೆ ಹಲವಾರು ಅನುಮಾನಗಳು ಕಾಡತೊಡಗಿವೆ. ಯಾಕೆಂದರೆ ವಿಶ್ಲೇಷಣೆಯ ಸಂದರ್ಭದಲ್ಲಿ ಬಹುತೇಕ ಮೊಬೈಲ್‌ ಫೋನ್‌ಗಳು ಸ್ವಿಚ್‌ ಆಫ್‌ ಆಗಿರುವ ಸ್ಫೋಟಕ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಸದ್ಯ ತನಿಖಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.ಸ್ವಿಚ್‌ ಆಫ್‌ ಆಗಿರುವ ಮೊಬೈಲ್‌ ಸಂಖ್ಯೆಗಳ ಗ್ರಾಹಕರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.ಈಗ ಪೊಲೀಸ್‌ ಕಂಟ್ರೋಲ್‌ ರೂಮ್‌ನಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಗಳಿಂದ ಮುಖ ಗುರುತಿಸುವಿಕೆ ಅಪ್ಲಿಕೇಶನ್ ಮೂಲಕ ಶಂಕಿತರನ್ನು ಗುರುತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೌನಿ ಅಮಾವಾಸ್ಯೆಯಂದು ಸ್ನಾನ ಮಾಡಲು ನೂಕು ನುಗ್ಗಲು ಉಂಟಾಗಿ ಸುಮಾರು 30 ಮಂದಿ ಕಾಲ್ತುಳಿತಕ್ಕೆ ಬಲಿಯಾಗಿದ್ದರು.ಅದರಲ್ಲಿ ಕರ್ನಾಟಕದವರು ಇದ್ದರು.ಜನಸಮೂಹವು ಬ್ಯಾರಿಕೇಡ್‌ಗಳನ್ನು ಹಾರಿ ಮುನ್ನುಗ್ಗಿದ್ದರಿಂದ ಈ ದುರಂತ ಸಂಭವಿಸಿತ್ತು.ಆದರೆ ಮಹಾಕುಂಭ ಮೇಳದಲ್ಲಿ ಇಂತಹ ದುರಂತ ಸಂಭವಿಸುವುದಕ್ಕೆ ಹೇಗೆ ಸಾಧ್ಯವಾಯಿತು.ಇದರ ಹಿಂದೆ ಕಾಣದ ಕೈಗಳ ಕೈವಾಡವಿರಬಹುದು ಎಂದು ಯೋಗಿ ಅದಿತ್ಯನಾಥ್‌ ಸರ್ಕಾರ ಈ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಮೂವರು ಸದಸ್ಯರ ನ್ಯಾಯಾಂಗ ಆಯೋಗವು ಶುಕ್ರವಾರ ಘಟನೆಯ ಸ್ಥಳಕ್ಕೆ ಭೇಟಿ ನೀಡಿತ್ತು. ಸಮಿತಿಯು ತನ್ನ ತನಿಖೆಯನ್ನು ಮುಗಿಸಿ ವರದಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶವಿದೆ.144 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭ ಮೇಳವು ಜನವರಿ 13 ರಂದು ಪ್ರಾರಂಭವಾಗಿದ್ದು ಫೆಬ್ರವರಿ 26 ರವರೆಗೆ ನಡೆಯಲಿದೆ. ಸುಮಾರು 40 ಕೋಟಿ ಭಕ್ತರು ಈ ಕುಂಭಮೇಳದಲ್ಲಿ ಭಾಗಿಯಾಗಬಹುದು ಎಂದು ಉತ್ತರಪ್ರದೇಶ ಸರ್ಕಾರ ಆಂದಾಜಿಸಿದೆ.

Related posts

ರಾಯಭಾರ ಕಚೇರಿ ನೌಕರನ ಹನಿಟ್ರ್ಯಾಪ್‌..! ಸೇನೆಯ ಗೌಪ್ಯ ಮಾಹಿತಿ ಪಾಕ್‌ಗೆ ರವಾನೆ..?

ಬಳ್ಳಾರಿಯ ಜೈಲು ಸಿಬ್ಬಂದಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದರ್ಶನ್‌ ದೂರು ನೀಡಲು ತಯಾರಿ..? ವಕೀಲರ ಜೊತೆ ಮಾತುಕತೆ..!

6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ..! ಗಂಡನೊಂದಿಗೆ ಗಲಾಟೆ