Latestಕ್ರೈಂರಾಜ್ಯವೈರಲ್ ನ್ಯೂಸ್

ಯೂಟ್ಯೂಬ್ ನೋಡಿಕೊಂಡು ಹೆರಿಗೆ ಮಾಡಿಕೊಂಡ ಯುವತಿ..! ಮಗುವಿನ ಹತ್ಯೆ ಮಾಡಿದ್ದ ಪ್ರೇಮಿಗಳಿಗೆ ನ್ಯಾಯಾಂಗ ಬಂಧನ..!

626

ನ್ಯೂಸ್‌ ನಾಟೌಟ್: ಯ್ಯೂಟ್ಯೂಬ್ ನೋಡಿ ಹೆರಿಗೆ ಮಾಡಿಕೊಂಡು ಹೆತ್ತ ಮಗುವನ್ನು ಹತ್ಯೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಘಟನೆ ಬೆಳಗಾವಿಯ ಕಿತ್ತೂರು ತಾಲೂಕಿನ ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದೆ.

ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಎಂದು ಗುರುತಿಸಲಾಗಿದೆ. ಮಾ.5ರಂದು ಅಂಬಡಗಟ್ಟಿಯ ಮನೆಯೊಂದರ ಹಿತ್ತಲಿನ ತಿಪ್ಪೆಗುಂಡಿಯಲ್ಲಿ ಮಗವಿನ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ಭೇದಿಸುವಲ್ಲಿ ಕಿತ್ತೂರು ಪೊಲೀಸರು ಈಗ ಯಶಸ್ವಿಯಾಗಿದ್ದಾರೆ.

ಅಂಬಡಗಟ್ಟಿಯ ಮಹಾಬಲೇಶ್ವರ ಹಾಗೂ ಸಿಮ್ರನ್‌ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮಹಾಬಲೇಶ್ವರನ ಜೊತೆ ಸಲುಗೆಯಿಂದ ಸಿಮ್ರನ್‌ ಗರ್ಭಿಣಿಯಾಗಿದ್ದಳು. ಸಿಮ್ರನ್‌ ದಪ್ಪ ಇದ್ದ ಕಾರಣ ಗರ್ಭಿಣಿಯಾದ ವಿಷಯ ಮನೆಯವರಿಗೆ ಗೊತ್ತಾಗಿರಲಿಲ್ಲ ಎನ್ನಲಾಗಿದೆ. 9 ತಿಂಗಳ ಬಳಿಕ ಮಾ.5ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಬಾತ್‌ ರೂಮ್‌ ನಲ್ಲಿ ಹೋಗಿ ಸಿಮ್ರನ್‌ ಸ್ವಯಂ ಹೆರಿಗೆ ಮಾಡಿಕೊಂಡು ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಹೆರಿಗೆ ಸಂದರ್ಭದಲ್ಲಿ ಪ್ರಿಯಕರ ಮಹಾಬಲೇಶ್ವರ ಕೂಡ ವಿಡಿಯೊ ಕಾಲ್‌ನಲ್ಲಿ ಮಾರ್ಗದರ್ಶನ ಮಾಡಿದ್ದ. ಅಲ್ಲದೆ, ಹೆರಿಗೆ ಹೇಗೆ ಮಾಡಿಕೊಳ್ಳಬೇಕು ಎಂಬುದನ್ನು ಸಿಮ್ರನ್‌ ಯ್ಯೂಟೂಬ್‌ ನಲ್ಲಿ ನೋಡಿದ್ದಳು ಎನ್ನಲಾಗಿದೆ. ಹೆರಿಗೆಯಾದ ಬಳಿಕ ಯಾರಿಗೂ ಗೊತ್ತಾಗದ ರೀತಿಯಲ್ಲಿ ಮಗುವನ್ನು ಪ್ಲಾಸ್ಟಿಕ್‌ ನಲ್ಲಿ ಹಾಕಿ ತಿಪ್ಪೆಗುಂಡಿಯಲ್ಲಿ ಬಿಸಾಡಲಾಗಿತ್ತು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಪ್ರೊಫೆಸರ್‌ ಮಾಡಿದ ಡ್ಯಾನ್ಸ್ ಗೆ ವಿದ್ಯಾರ್ಥಿಗಳ ಶಿಳ್ಳೆ, ಚಪ್ಪಾಳೆ..! ವಿಡಿಯೋ ವೈರಲ್

See also  1000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ..! ಪತ್ರಕರ್ತ ಸೇರಿ 14 ಮಂದಿಯ ಬಂಧನ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget